ರಾಣೇಬೆನ್ನೂರು : ತುಂಗಭದ್ರಾ ನದಿಯಲ್ಲಿ ಮರಳು ತೆಗೆಯಲು ಹೋಗಿದ್ದ ವೇಳೆ ಇಬ್ಬರು ಯುವಕರು ನೀರು ಪಾಲಾಗಿದ್ದು, ಅವರಿಗಾಗಿ ತೀವ್ರ ಹುಡುಕಾಟ ನಡೆಸಲಾಗಿದೆ.
ಹಾವೇರಿ ಜಿಲ್ಲೆಯ ರಾಣೇಬೆನ್ನೂರ ತಾಲೂಕಿನ ಆರೇಮಲ್ಲಾಪುರ ಗ್ರಾಮದ ಜಗದೀಶ ಅಣ್ಣೇರ(25) ಹಾಗೂ ಬೆಟ್ಟಪ್ಪ ಮಿಳ್ಳಿ(23) ಎಂಬ ಯುವಕರು ಕೋಣನತಂಬಗಿ ಗ್ರಾಮಕ್ಕೆ ಮರಳು ತರಲು ತೆರಳಿದ್ದಾರೆ. ಈ ಸಮಯದಲ್ಲಿ ನದಿಯಲ್ಲಿ ನೀರಿನ ಹರಿವು ಹೆಚ್ಚಾಗಿ ಮುಳಗಿದ್ದಾರೆ. ಈವರೆಗೂ ಸಹ ಯುವಕರ ಪತ್ತೆಯಾಗದ ಕಾರಣ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.
ಇದನ್ನೂ ಓದಿ...ರಾಣೆಬೆನ್ನೂರು: ಮರಳು ತೆಗೆಯಲು ಹೋದ ಇಬ್ಬರು ಯುವಕರು ಎತ್ತುಗಳೊಂದಿಗೆ ನೀರುಪಾಲು
ಮುಳಗಿದ ಯುವಕರ ಶೋಧಕ್ಕಾಗಿ ಅಗ್ನಿಶಾಮಕ ದಳ ಮತ್ತು ಪೊಲೀಸರು ಮುಂದಾಗಿದ್ದು, ನದಿ ಪಾತ್ರದ ಗ್ರಾಮದ ಜನರಿಗೆ ಮಾಹಿತಿ ನೀಡಲಾಗುತ್ತಿದೆ ಎನ್ನಲಾಗಿದೆ.