ರಾಣೆಬೆನ್ನೂರು: ನೆರೆ ಪರಿಹಾರ ವಿತರಣೆಯಲ್ಲಿ ಅಕ್ರಮ ಎಸಗಿದ ಆರೋಪದ ಮೇಲೆ ಕಾಕೋಳ ಗ್ರಾಮದ ಗ್ರಾಮ ಲೆಕ್ಕಾಧಿಕಾರಿಯನ್ನು ಪೊಲೀಸರು ಬಂಧಿಸಿದ್ದಾರೆ.
ವೆಂಕಟೇಶ ಮಡಿವಾಳರ (24) ಬಂಧಿತ ಗ್ರಾಮ ಲೆಕ್ಕಾಧಿಕಾರಿ. ಹಾವೇರಿ ಜಿಲ್ಲೆ ರಾಣೆಬೆನ್ನೂರು ತಾಲೂಕಿನ ಕಾಕೋಳ ಗ್ರಾಮದಲ್ಲಿ ಸರ್ಕಾರಿ ಜಮೀನಿನ ಹೆಸರಿನಲ್ಲಿ ಬೆಳೆ ಪರಿಹಾರ ಹಂಚಿಕೆ ಮಾಡಿದ್ದು, ಗ್ರಾಮಲೆಕ್ಕಿಗ ಹಣವನ್ನು ಸ್ನೇಹಿತನ ಖಾತೆಗೆ ಪರಿಹಾರದ ಹಣ ಜಮಾ ಆಗುವಂತೆ ಮಾಡಿದ್ದ ಎಂದು ದೂರಲಾಗಿದೆ. ಆಗಸ್ಟ್ 2019ರಲ್ಲಿ ನೆರೆಗೆ ಹಾಳಾಗಿದ್ದ ಬೆಳೆ ಪರಿಹಾರ ಹಣ ಇದಾಗಿತ್ತು.
ರಾಣೆಬೆನ್ನೂರು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಅಪರ ಜಿಲ್ಲಾಧಿಕಾರಿ ಯೋಗೇಶ್ವರ್ ದಾಖಲಿಸಿದ್ದ ದೂರಿನ ಮೇರೆಗೆ ಈತನನ್ನು ಬಂಧಿಸಿಲಾಗಿದೆ. ಬಂಧಿತ ಗ್ರಾಮ ಲೆಕ್ಕಾಧಿಕಾರಿಯನ್ನು ಪೊಲೀಸರು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.