ಹಾವೇರಿ: ಜಿಲ್ಲೆಯಲ್ಲಿ ಪ್ರತ್ಯೇಕ ಹಾಲು ಒಕ್ಕೂಟ ಸ್ಥಾಪನೆ ಮಾಡಬೇಕೆಂದು ಧಾರವಾಡ ಹಾಲು ಒಕ್ಕೂಟದ ಅಧ್ಯಕ್ಷ ಬಸವರಾಜ ಅರಬಗೊಂಡ ಒತ್ತಾಯಿಸಿದರು.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸದ್ಯ ಧಾರವಾಡ ಹಾಲು ಒಕ್ಕೂಟದ ವ್ಯಾಪ್ತಿಯಲ್ಲಿರೋ ಹಾವೇರಿ ಜಿಲ್ಲೆ ಇಡೀ ಒಕ್ಕೂಟದ ವ್ಯಾಪ್ತಿಯಲ್ಲಿ ಅತೀ ಹೆಚ್ಚು ಹಾಲು ಉತ್ಪಾದನೆ ಮಾಡುತ್ತದೆ. ಜಿಲ್ಲೆಯ 470 ಗ್ರಾಮಗಳಲ್ಲಿ ಜನರು ಪಶು ಸಂಗೋಪನೆ ಮಾಡುತ್ತಿದ್ದಾರೆ. ಹೀಗಾಗಿ ಪ್ರಸಕ್ತ ವರ್ಷದ ಬಜೆಟ್ನಲ್ಲಿ ಜಿಲ್ಲೆಗೆ ಪ್ರತ್ಯೇಕ ಹಾಲು ಒಕ್ಕೂಟ ಸ್ಥಾಪನೆಗೆ 100 ಕೋಟಿ ರೂ. ಅನುದಾನ ನೀಡುವಂತೆ ಒತ್ತಾಯಿಸಿದರು.
ಜಿಲ್ಲೆಗೆ ಆಗಮಿಸಲಿರುವ ಸಿಎಂ ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಜಿಲ್ಲೆಯ ಎಲ್ಲಾ ಶಾಸಕರು, ಸಚಿವರು ಸೇರಿಕೊಂಡು ಪ್ರತ್ಯೇಕ ಹಾಲು ಒಕ್ಕೂಟ ಸ್ಥಾಪನೆಗೆ ಮನವಿ ಮಾಡುತ್ತೇವೆ ಎಂದರು.