ETV Bharat / state

ಉಪಚುನಾವಣೆಯಲ್ಲೂ ನಾವೇ ಗೆಲ್ಲೋದು: ಸಚಿವ ಬೊಮ್ಮಾಯಿ ವಿಶ್ವಾಸ

ಡಿಸೆಂಬರ್​ನಲ್ಲಿ ನಡೆಯಲಿರುವ ಉಪಚುನಾವಣೆಗೆ ಎಲ್ಲಾ ಪಕ್ಷಗಳು ತಂತ್ರ ಪ್ರತಿತಂತ್ರಗಳನ್ನು ಹೆಣೆಯುವುದರಲ್ಲಿ ನಿರತವಾಗಿವೆ. ಈ ಉಪಸಮರದಲ್ಲಿ ನಾವೇ ಗೆಲ್ಲುವುದಾಗಿ ಗೃಹ ಸಚಿವ ಬಸವರಾಜ​ ಬೊಮ್ಮಾಯಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

author img

By

Published : Oct 16, 2019, 1:59 PM IST

Updated : Oct 16, 2019, 2:20 PM IST

ಗೃಹ ಸಚಿವ ಬಸವರಾಜ್​ ಬೊಮ್ಮಾಯಿ

ಹಾವೇರಿ: ಉಪಚುನಾವಣೆ ನಡೆಯುವ ಎಲ್ಲಾ ಕ್ಷೇತ್ರಗಳಲ್ಲೂ ಬಿಜೆಪಿ ಜಯಭೇರಿ ಬಾರಿಸಲಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಹಾವೇರಿ ತಾಲೂಕಿನ ನಾಗನೂರಿನಲ್ಲಿ ಮಾಧ್ಯಮದವರ ಜೊತೆ ಅವರು ಮಾತನಾಡಿದ್ರು.

ಮಾಧ್ಯಮದವರ ಪ್ರಶ್ನೆಗಳಿಗೆ ಉತ್ತರಿಸುತ್ತಿರುವ ಗೃಹ ಸಚಿವ ಬಸವರಾಜ್​ ಬೊಮ್ಮಾಯಿ

ವಿಧಾನಸಭೆ ಅಧಿವೇಶನ ಮೂರು ದಿನಗಳಿಗೆ ಸೀಮಿತಗೊಳಿಸಿದ ವಿಚಾರಕ್ಕೆ ಸಂಬಂಧಿಸಿದಂತೆ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಬೊಮ್ಮಾಯಿ, ಮಹಾರಾಷ್ಟ್ರ ಚುನಾವಣೆಗೂ ಅಧಿವೇಶನ ಮೊಟಕುಗೊಳಿಸಿರುವುದಕ್ಕೂ ಯಾವುದೇ ಸಂಬಂಧವಿಲ್ಲ. ಅಧಿವೇಶನವನ್ನು 10 ದಿನ ಮೊದಲೇ ನಿಗದಿಪಡಿಸಲಾಗಿದೆ. ಆದ್ರೆ, ಚುನಾವಣೆ ಅಧಿಸೂಚನೆ ಪ್ರಕಟವಾಗಿದ್ದರಿಂದ ಮೂರು ದಿನಗಳಿಗೆ ಮೊಟಕುಗೊಳಿಸಲಾಗಿದೆ. ಮುಂದಿನ ದಿನಗಳಲ್ಲಿ ಉಳಿದ ದಿನಗಳ ಅಧಿವೇಶನ ನಡೆಸಲಾಗುವುದು ಎಂದು ಸ್ಪಷ್ಟನೆ ಕೊಟ್ಟರು.

ಇದೇ ವೇಳೆ, ಕೆಲ ಮುಖಂಡರು ನಿಗಮ ಮಂಡಳಿ ಹುದ್ದೆ ಸ್ವೀಕರಿಸುತ್ತಿಲ್ಲ ಎಂಬ ಮಾತು ಕೇಳಿಬಂದಿದೆ. ಆದರೆ ಅವರ ಮನವೊಲಿಸುವುದಾಗಿ ಸಚಿವರು ತಿಳಿಸಿದರು.

Intro:FileBody:FileConclusion:File
Last Updated : Oct 16, 2019, 2:20 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.