ಹಾವೇರಿ:ಉಪಚುನಾವಣೆಯಲ್ಲಿ ಗೆಲುವಿಗಾಗಿ ಎಲ್ಲ ಪಕ್ಷಗಳ ನಾಯಕರು ಹಲವು ಕಸರತ್ತುಗಳನ್ನು ನಡೆಸುತ್ತಿದ್ದಾರೆ. ಗೆಲ್ಲಲೇಬೇಕೆಂದು ಪಣ ತೊಟ್ಟು ಹಣದ ಹೊಳೆಯನ್ನೇ ಹರಿಸುತ್ತಿದ್ದಾರೆ ಎಂಬ ಆರೋಪಗಳಿವೆ. ಈ ಮಧ್ಯೆ ಜಿಲ್ಲೆಯಲ್ಲಿ 70 ಲಕ್ಷ ರೂಪಾಯಿ ನಗದನ್ನು ವಶಪಡಿಸಿಕೊಳ್ಳಲಾಗಿದೆ.
ಉಪಚುನಾವಣೆ ನೀತಿ ಸಂಹಿತೆ ಹಿನ್ನೆಲೆ ಸೂಕ್ತ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 70 ಲಕ್ಷ ರೂಪಾಯಿ ನಗದನ್ನು ಶಿಗ್ಗಾಂವಿ ತಾಲೂಕಿನ ತಡಸ ಗ್ರಾಮದ ಬಳಿ ಇರೋ ಚೆಕ್ ಫೋಸ್ಟ್ನಲ್ಲಿ ವಶಕ್ಕೆ ಪಡೆಯಲಾಗಿದೆ. ಹುಬ್ಬಳ್ಳಿಯಿಂದ ಹಾವೇರಿಯತ್ತ ಹಣ ಸಾಗಿಸುತ್ತಿದ್ದ ವೇಳೆ ವಶಕ್ಕೆ ಪಡೆಯಲಾಗಿದೆ ಎಂದು ತಿಳಿದುಬಂದಿದೆ.
ಇನ್ನು, ಹಣ ವಶಕ್ಕೆ ಪಡೆದಿರುವ ಎಸ್ ಎಸ್ ಟಿ ತಂಡದ ಅಧಿಕಾರಿಗಳು ಹಣ ಸಾಗಿಸುತ್ತಿದ್ದವರನ್ನು ವಿಚಾರಣೆ ನಡೆಸುತ್ತಿದ್ದಾರೆ. ಸ್ಥಳಕ್ಕೆ ಆದಾಯ ತೆರಿಗೆ ಇಲಾಖಾಧಿಕಾರಿಗಳು ಸಹ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ತಡಸ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.