ಹಾವೇರಿ: ಜಿಲ್ಲಾ ಕೇಂದ್ರ ಬಸ್ ನಿಲ್ದಾಣ ಸೇರಿದಂತೆ ಜಿಲ್ಲೆಯಲ್ಲಿರುವ ಬಸ್ ನಿಲ್ದಾಣಗಳು ಪ್ರಯಾಣಿಕರಿಲ್ಲದೆ ಖಾಲಿ ಖಾಲಿಯಾಗಿದ್ದವು.
ಆರನೇ ವೇತನ ಆಯೋಗ ಜಾರಿಗೆ ಆಗ್ರಹಿಸಿ ಸಾರಿಗೆ ನೌಕರರು ನಡೆಸುತ್ತಿರುವ ಪ್ರತಿಭಟನೆ 7ನೇ ದಿನಕ್ಕೆ ಕಾಲಿಟ್ಟಿದ್ದು, ಹಾವೇರಿ ಜಿಲ್ಲೆಯಲ್ಲಿ ಸಾರಿಗೆ ಇಲಾಖೆಯ ಬೆರಳೆಣಿಕೆಯಷ್ಟು ಬಸ್‌ಗಳು ಸಂಚರಿಸಿದವು.
ಇದರಿಂದಾಗಿ ಸೂಕ್ತ ಬಸ್ ವ್ಯವಸ್ಥೆಯಿಲ್ಲದೇ ಹಬ್ಬಕ್ಕೆ ತೆರಳುವ ಪ್ರಯಾಣಿಕರು ಪರದಾಡುವ ಸ್ಥಿತಿ ನಿರ್ಮಾಣವಾಗಿತ್ತು. ನಿನ್ನೆ ತಟ್ಟೆ, ಲೋಟ ಹಿಡಿದು ಪ್ರತಿಭಟನೆ ನಡೆಸಿದ್ದ ನೌಕರರ ಕುಟುಂಬಸ್ಥರು ಇಂದು ಕಾಣಲಿಲ್ಲ.
ಓದಿ: ಹಬ್ಬ ಮಾಡಲು ಹಣವಿಲ್ಲ: ತನ್ನಿಬ್ಬರು ಮಕ್ಕಳೊಂದಿಗೆ ಸಾರಿಗೆ ನೌಕರನಿಂದ ಭಿಕ್ಷಾಟನೆ