ETV Bharat / state

ಮನೆ ಗೋಡೆ ಕುಸಿದು ಮಹಿಳೆ ಸಾವು - ಆಡೂರು ಪೊಲೀಸ್ ಠಾಣೆ

ಆಡೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ರಾತ್ರಿ ಸುರಿದ ಮಳೆಗೆ ಮನೆ ಗೋಡೆ ಕುಸಿದು ಮಹಿಳೆ ಸಾವನ್ನಪ್ಪಿದ್ದು, ಮಹಿಳೆಯ ಪತಿ ಹಾಗೂ ಮಗ ಅದೃಷ್ಟವಶಾತ್​ ಅಪಾಯದಿಂದ ಪಾರಾಗಿದ್ದಾರೆ.

Woman dies after house wall collapses
ಮನೆ ಗೋಡೆ ಕುಸಿದು ಮಹಿಳೆ ಸಾವು
author img

By

Published : Aug 30, 2022, 10:14 AM IST

Updated : Aug 30, 2022, 1:02 PM IST

ಹಾವೇರಿ: ರಾತ್ರಿ ಸುರಿದ ಮಳೆಗೆ ಮನೆಯ ಗೋಡೆ ಕುಸಿದು ಬಿದ್ದು ಮಹಿಳೆ ಸಾವನ್ನಪ್ಪಿದ ಘಟನೆ ಹಾವೇರಿ ಜಿಲ್ಲೆ ಹಾನಗಲ್ ತಾಲೂಕಿನ ತುಮರಿಕೊಪ್ಪ ಗ್ರಾಮದಲ್ಲಿ ನಡೆದಿದೆ. ಮೃತ ಮಹಿಳೆಯನ್ನು 48 ವರ್ಷದ ನಿಂಬವ್ವ ನೆಗಳೂರು ಎಂದು ಗುರುತಿಸಲಾಗಿದೆ. ಮನೆಯಲ್ಲಿ ಮಲಗಿದ್ದ ವೇಳೆ ಮನೆ ಗೋಡೆ ಕುಸಿದು ಬಿದ್ದಿದ್ದರಿಂದ ಈ ಘಟನೆ ನಡೆದಿದೆ. ಮನೆಯಲ್ಲಿದ್ದ ನಿಂಬವ್ವಳ ಪತಿ ಮತ್ತು ಮಗ ಅದೃಷ್ಟವಶಾತ್ ಪಾರಾಗಿದ್ದಾರೆ.

ಮನೆ ಗೋಡೆ ಕುಸಿದು ಮಹಿಳೆ ಸಾವು

ಆಡೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಮಧ್ಯ ಜಿಲ್ಲೆಯಲ್ಲಿ ಕಳೆದ ರಾತ್ರಿಯಿಂದ ನಿರಂತರ ಮಳೆ ಸುರಿಯುತ್ತಿದ್ದು, ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಜಿಲ್ಲೆಯಲ್ಲಿ ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಜಿಲ್ಲಾಧಿಕಾರಿ ಸಂಜಯ ಶೆಟ್ಟೆಣ್ಣವರ್ ಜಿಲ್ಲೆಯಲ್ಲಿನ ಶಾಲೆಗಳಿಗೆ ರಜೆ ಘೋಷಣೆ ಮಾಡಿದ್ದಾರೆ.

ಇದನ್ನೂ ಓದಿ : ಮಾಂಬಳ್ಳಿ ಪೊಲೀಸ್ ಠಾಣೆ ಜಲಾವೃತ.. ಅಪಾಯಕ್ಕೆ ಸಿಲುಕಿದ್ದ ಅಧಿಕಾರಿಗಳ ರಕ್ಷಣೆ

Last Updated : Aug 30, 2022, 1:02 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.