ಹಾವೇರಿ: ಜಿಲ್ಲೆಯ ಸವಣೂರು ತಾಲೂಕಿನ ಹಿರೇಮುಗದೂರು ಗ್ರಾಮದಲ್ಲಿ ಅಕ್ರಮ ಮದ್ಯ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಹಿಡಿದಿರುವ ಮಹಿಳೆಯರು, ಅಬಕಾರಿ ಇಲಾಖೆಗೆ ಒಪ್ಪಿಸಿದ್ದಾರೆ.
ಮನೆಯಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡ್ತಿದ್ದ ಗ್ರಾಮದ ಹೆಗ್ಗಪ್ಪ ನಡುವಿನಮನಿ ಎಂಬಾತನನ್ನು ಅಬಕಾರಿ ಇಲಾಖೆ ಅಧಿಕಾರಿಗಳಿಗೆ ಹಿಡಿದುಕೊಟ್ಟಿರುವ ಮಹಿಳೆಯರು, ತಕ್ಕ ಶಿಕ್ಷೆ ನೀಡುವಂತೆ ಒತ್ತಾಯಿಸಿದ್ದಾರೆ.
ಗ್ರಾಮದಲ್ಲಿ ಅಕ್ರಮ ಮದ್ಯ ಮಾರಾಟ ತಡೆಯುವಂತೆ ಅಧಿಕಾರಿಗಳಿಗೆ ಹಲವು ಬಾರಿ ಮನವಿ ಸಲ್ಲಿಸಿದ್ದ ಮಹಿಳೆಯರು, ಇದೀಗ ನೇರವಾಗಿ ತಾವೇ ಆರೋಪಿಯನ್ನು ಹಿಡಿದುಕೊಡುವ ಕೆಲಸ ಮಾಡಿದ್ದಾರೆ. ಸವಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.