ಹಾನಗಲ್: ಸಂಶಯಾಸ್ಪದ ರೀತಿಯಲ್ಲಿ ಯುವಕನ ಮೃತದೇಹ ಪತ್ತೆಯಾಗಿದೆ. ಹೊಡೆದು ಕೊಲೆ ಮಾಡಿ ಮೃತದೇಹ ಎಸೆದು ಹೋಗಿರುವ ಶಂಕೆ ವ್ಯಕ್ತವಾಗಿದ್ದು, ಹಾವೇರಿ ಜಿಲ್ಲೆಯ ಹಾನಗಲ್ ಪಟ್ಟಣದ ಹೊರವಲಯದಲ್ಲಿ ಈ ಘಟನೆ ನಡೆದಿದೆ.
ಸಂತೋಷ ವಾಲೀಕಾರ (32 ವರ್ಷ) ಎಂಬುವವರ ಮೃತದೇಹ ಪತ್ತೆಯಾಗಿದ್ದು, ಯುವಕನ ಜೊತೆ ಅನೈತಿಕ ಸಂಬಂಧ ಹೊಂದಿದ್ದ ಮಹಿಳೆಯ ಸಂಬಂಧಿಕರಿಂದ ಹತ್ಯೆಗೊಳಗಾಗಿರುವ ಆರೋಪ ಕೇಳಿ ಬಂದಿದೆ. ಸ್ಥಳಕ್ಕೆ ಹಾನಗಲ್ ಪಿಎಸ್ಐ ಶ್ರೀಶೈಲ ಪಟ್ಟಣಶೆಟ್ಟಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಇನ್ನು ಈ ಪ್ರಕರಣ ಹಾನಗಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.