ಕಲಬುರಗಿ: ಜಿಲ್ಲೆಯಲ್ಲಿ ಕೊರೊನಾ ಅಟ್ಟಹಾಸ ಮುಂದುವರೆದಿದೆ. ಇಂದು ಒಂದೇ ದಿನ 10 ಮಂದಿ ಮೃತಪಟ್ಟಿದ್ದು, ಸಾವಿನ ಸಂಖ್ಯೆ 82ಕ್ಕೆ ಏರಿಕೆಯಾಗಿದೆ.
ಇಂದು 45 ವರ್ಷದ ವ್ಯಕ್ತಿ, 58 ವರ್ಷದ ವ್ಯಕ್ತಿ, 59 ವರ್ಷದ ವ್ಯಕ್ತಿ, 35 ವರ್ಷದ ಮಹಿಳೆ, 63 ವರ್ಷದ ವೃದ್ಧೆ, 56 ವರ್ಷದ ವ್ಯಕ್ತಿ, 78 ವರ್ಷದ ವೃದ್ಧ, 62 ವರ್ಷದ ವೃದ್ಧ, 52 ವರ್ಷದ ವ್ಯಕ್ತಿ ಹಾಗೂ 55 ವರ್ಷದ ವ್ಯಕ್ತಿ ಸೋಂಕಿಗೆ ಬಲಿಯಾಗಿದ್ದಾರೆ. ಈ ಮೂಲಕ ಜಿಲ್ಲೆಯಲ್ಲಿ ಮೃತರ ಸಂಖ್ಯೆ 82ಕ್ಕೆ ಏರಿಕೆಯಾಗಿದೆ.
ಇವತ್ತು 119 ಸೋಂಕಿತರು ಕೋವಿಡ್ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು, ಈವರೆಗೆ 2,429 ಮಂದಿ ಸಂಪೂರ್ಣ ಗುಣಮುಖರಾಗಿದ್ದಾರೆ. ಸದ್ಯ 2,435 ಸಕ್ರಿಯ ಪ್ರಕರಣಗಳಿಗೆ ಚಿಕಿತ್ಸೆ ಮುಂದುವರೆದಿದೆ.