ಕಲಬುರಗಿ: ಜಿಲ್ಲೆಯಲ್ಲಿ ಕೊರೊನಾ ಸೋಂಕಿಗೆ ಮತ್ತೊಂದು ಬಲಿಯಾಗಿದೆ. ಇದರೊಂದಿಗೆ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 38 ಕ್ಕೆ ಏರಿಕೆಯಾಗಿದೆ.
ಆಳಂದ ತಾಲೂಕಿನ ಧಂಗಾಪೂರ ಗ್ರಾಮದ 55 ವರ್ಷದ ವ್ಯಕ್ತಿ (ಪಿ.47420) ಜುಲೈ 11 ರಂದು ತೀವ್ರ ಉಸಿರಾಟ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾಗಿ ಜುಲೈ 13 ರಂದು ಸಾವನ್ನಪ್ಪಿದ್ದಾರೆ.
ಜಿಲ್ಲೆಯಲ್ಲಿ ಇಂದು ಹೊಸದಾಗಿ 123 ಜನರಿಗೆ ಸೋಂಕು ದೃಢಪಟ್ಟಿದೆ. ಇದರೊಂದಿಗೆ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 2503 ಕ್ಕೆ ಏರಿಕೆಯಾಗಿದೆ. ಇಂದು ಐವರು ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದು, ಒಟ್ಟು ಈವರೆಗೆ 1525 ಜನ ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿ 940 ಆ್ಯಕ್ಟಿವ್ ಕೇಸ್ಗಳಿದ್ದು ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.