ಕಲಬುರಗಿ: ಜಿಲ್ಲೆಯಲ್ಲಿ ಕೊರೊನಾ ರಣಕೇಕೆ ಮುಂದುವರೆದಿದ್ದು, ಇಂದು ಎಂಟು ತಿಂಗಳ ಮಗು ಸೇರಿದಂತೆ ಹದಿನಾರು ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ. ಜಿಲ್ಲೆಯಲ್ಲಿ ಸೊಂಕಿತರ ಸಂಖ್ಯೆ 796ಕ್ಕೆ ಏರಿಕೆಯಾಗಿದೆ.
ಕಲಬುರಗಿಗೆ ಮಹಾರಾಷ್ಟ್ರದ ಕಂಟಕ ಬೆಂಬಿಡದೆ ಕಾಡುತ್ತಿದ್ದು, ಮಹಾರಾಷ್ಟ್ರದಿಂದ ವಾಪಸಾದ ವಲಸಿಗರಲ್ಲಿಯೇ 16 ಜನರಲ್ಲಿ ಸೋಂಕು ಪತ್ತೆಯಾಗಿದೆ. ಎಂಟು ತಿಂಗಳ ಮಗು ಸೇರಿದಂತೆ ಏಳು ಮಕ್ಕಳು, ಐವರು ಮಹಿಳೆಯರು ಹಾಗೂ ನಾಲ್ವರು ಪುರುಷರಿಗೆ ಸೋಂಕು ತಗುಲಿದೆ. ಮತ್ತೊಂದೆಡೆ ಇಂದು ಆರು ಜನ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.