ಕಲಬುರಗಿ: ಜಿಲ್ಲೆಯಲ್ಲಿ ಕೊರೊನಾ ಸೋಂಕಿಗೆ ಮತ್ತೆ ಆರು ಜನ ಬಲಿಯಾಗಿದ್ದಾರೆ. ನಾಲ್ವರು ಪುರುಷರು, ಇಬ್ಬರು ಮಹಿಳೆಯರು ಕೋವಿಡ್ನಿಂದ ಸಾವನ್ನಪ್ಪಿದ್ದಾರೆ. ಈ ಮೂಲಕ ಜಿಲ್ಲೆಯಲ್ಲಿ ಸಾವನ್ನಪ್ಪಿದವರ ಸಂಖ್ಯೆ 106ಕ್ಕೆ ಏರಿದೆ.
ಇಂದು ಜಿಲ್ಲೆಯಲ್ಲಿ 238 ಜನರಿಗೆ ಸೋಂಕು ದೃಢಪಟ್ಟಿದೆ. ಸೋಂಕಿತರ ಸಂಖ್ಯೆ 5,767 ಗೆ ಏರಿಕೆಯಾಗಿದೆ. ಇಂದು 117 ಜನ ಡಿಸ್ಚಾರ್ಜ್ ಆಗಿದ್ದು, ಡಿಸ್ಚಾರ್ಜ್ ಆದವರ ಸಂಖ್ಯೆ 2,949 ಗೆ ಏರಿಕೆಯಾಗಿದೆ. ಜಿಲ್ಲೆಯಲ್ಲಿ 2,0712 ಸಕ್ರಿಯ ಪ್ರಕರಣಗಳಿವೆ.