ಕಲಬುರಗಿ: ಇಂದು ಕಲಬುರಗಿಯಲ್ಲಿ 285 ಸೋಂಕಿತರು ಪತ್ತೆಯಾಗಿದ್ದು, ಇಬ್ಬರು ಮೃತಪಟ್ಟಿದ್ದಾರೆ ಎಂದು ಜಿಲ್ಲಾಡಳಿತ ಮಾಹಿತಿ ನೀಡಿದೆ.
60 ವರ್ಷದ ಮಹಿಳೆ ಹಾಗೂ 58 ವರ್ಷದ ಪುರುಷ ಕೊರೊನಾ ಸೋಂಕಿಗೆ ಸಾವನಪ್ಪಿದ್ದಾರೆ. ಈವರೆಗೆ ಮೃತಪಟ್ಟವರ ಸಂಖ್ಯೆ 163ಕ್ಕೆ ಏರಿಕೆಯಾಗಿದೆ.
ಇದುವರೆಗೆ ಸೋಂಕಿತರ ಸಂಖ್ಯೆ 8825ಕ್ಕೆ ಏರಿಕೆಯಾಗಿದೆ. ಇಂದು 322 ಜನ ಸೋಂಕಿತರು ಗುಣಮುಖರಾಗಿ, ಆಸ್ಪತ್ರೆಯಿಂದ ಮನೆಗೆ ತೆರಳಿದ್ದಾರೆ. ಒಟ್ಟು 6691 ಪ್ರಕರಣಗಳು ಗುಣಮುಖವಾಗಿದ್ದು, 1971 ಸಕ್ರಿಯ ಪ್ರಕರಣಗಳು ಇವೆ ಎಂದು ಮಾಹಿತಿ ನೀಡಲಾಗಿದೆ.