ETV Bharat / state

ಗುಲ್ಬರ್ಗಾ ವಿಶ್ವವಿದ್ಯಾಲಯದ 38ನೇ ವಾರ್ಷಿಕ ಘಟಿಕೋತ್ಸವ: ಸರಳ ಆಚರಣೆಗೆ ನಿರ್ಧಾರ

author img

By

Published : Nov 18, 2020, 10:50 PM IST

ಕೊರೊನಾ ಕಾರಣದಿಂದಾಗಿ ಈ ಬಾರಿ ಗುಲ್ಬರ್ಗಾ ವಿಶ್ವವಿದ್ಯಾಲಯದ 38ನೇ ವಾರ್ಷಿಕ ಘಟಿಕೋತ್ಸವವನ್ನು ಸರಳವಾಗಿ ಆಚರಿಸಲು ವಿವಿ ಆಡಳಿತ ಮಂಡಳಿ ನಿರ್ಧರಿಸಿದೆ.

Gulbarga University
ಗುಲ್ಬರ್ಗಾ ವಿಶ್ವವಿದ್ಯಾಲಯ

ಕಲಬುರಗಿ: ಕೋವಿಡ್-19 ಹಿನ್ನೆಲೆ ಗುಲ್ಬರ್ಗಾ ವಿಶ್ವವಿದ್ಯಾಲಯದ ವಾರ್ಷಿಕ ಘಟಿಕೋತ್ಸವ ಸರಳವಾಗಿ ಆಚರಿಸಲು ವಿವಿ ಆಡಳಿತ ಮಂಡಳಿ ನಿರ್ಧರಿಸಿದೆ.

ಕೊರೊನಾ ಕಾರಣದಿಂದಾಗಿ ಈ ಬಾರಿ ಅದ್ಧೂರಿ ಘಟಿಕೋತ್ಸವ ಸಮಾರಂಭಕ್ಕೆ ಬ್ರೇಕ್ ಹಾಕಲಾಗಿದೆ. ಪ್ರತಿ ವರ್ಷ ರಾಜ್ಯದ ಹಲವೆಡೆಗಳಿಂದ ವಿವಿಧ ಕಲಾವಿದರು, ವಿದ್ಯಾರ್ಥಿಗಳು ಘಟಿಕೋತ್ಸವ ಸಮಾರಂಭದಲ್ಲಿ ಭಾಗವಹಿಸುವ ಮೂಲಕ ಘಟಿಕೋತ್ಸವ ಸಮಾರಂಭವನ್ನು ವಿಜೃಂಭಣೆಯಿಂದ ಆಚರಣೆ ಮಾಡಲಾಗುತ್ತಿತ್ತು. ಆದರೆ ಸರ್ಕಾರದ ನಿರ್ದೇಶನ ಮೇರೆಗೆ ಹಾಗೂ ಕೊರೊನಾ ವೈರಸ್ ಹರಡುತ್ತಿರುವ ಹಿನ್ನೆಲೆಯಲ್ಲಿ ಗುಲ್ಬರ್ಗಾ ವಿಶ್ವವಿದ್ಯಾಲಯದ 38ನೇ ವಾರ್ಷಿಕ ಘಟಿಕೋತ್ಸವವನ್ನು ನವೆಂಬರ್ 20ರಂದು ಬೆಳಗ್ಗೆ 11 ಗಂಟೆಗೆ ಗುಲ್ಬರ್ಗಾ ವಿಶ್ವವಿದ್ಯಾಲಯದ ಜ್ಞಾನಗಂಗಾ ಆವರಣದ ಡಾ. ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಸರಳವಾಗಿ ಏರ್ಪಡಿಸಲಾಗಿದೆ.

ಘಟಿಕೋತ್ಸವ ಸಮಾರಂಭಕ್ಕೆ ಗಣ್ಯರು ಹಾಗೂ ವಿದ್ಯಾರ್ಥಿಗಳು, ಪೋಷಕರ ಪ್ರವೇಶ ನಿರ್ಬಂಧಿಸಲಾಗಿದೆ. ಹಾಗಾಗಿ ಎಲ್ಲರೂ ಸಹಕರಿಸಬೇಕೆಂದು ಗುಲ್ಬರ್ಗಾ ವಿಶ್ವವಿದ್ಯಾಲಯದ ಕುಲಸಚಿವ ಪ್ರೊ. ಸಿ.ಸೋಮಶೇಖರ ಮನವಿ ಮಾಡಿದ್ದಾರೆ.

For All Latest Updates

ETV Bharat Logo

Copyright © 2024 Ushodaya Enterprises Pvt. Ltd., All Rights Reserved.