ಕಲಬುರಗಿ: ವಿವಿಧ ಕಳ್ಳತನ ಪ್ರಕರಣದಲ್ಲಿ ಭಾಗಿಯಾಗಿದ್ದ ಕಳ್ಳರನ್ನು ಬಂಧಿಸುವಲ್ಲಿ ಕಲಬುರಗಿ ಗ್ರಾಮೀಣ ಪೊಲೀಸರು ಯಶಸ್ವಿಯಾಗಿದ್ದಾರೆ.
ಕಳೆದ ಎರಡು ದಿನಗಳ ಹಿಂದೆ ಆರ್.ಎಸ್ ಕಾಲೋನಿಯಲ್ಲಿ ಹಗಲೊತ್ತಿನಲ್ಲಿ ನಡೆದ ಕಳ್ಳತನ ಪ್ರಕರಣ ಬೆನ್ನುಹತ್ತಿದ ಪೊಲೀಸರು ವಿವಿಧ ಪ್ರಕರಣದಲ್ಲಿ ಭಾಗಿಯಾಗಿದ್ದ ನಾಲ್ಕು ಜನ ಆರೋಪಿಗಳನ್ನು ಬಂಧಿಸಿದ್ದಾರೆ. ವಾಜಿದ್ ಗಣವಾಲೆ, ಸಮೀರ್, ಮೊಹಮ್ಮದ್ ಇದ್ರೀಶ್, ಮಹಮ್ಮದ್ ಯೂನುಸ್ ಬಂಧಿತ ಆರೋಪಿಗಳಾಗಿದ್ದಾರೆ.
ಬಂಧಿತರಿಂದ 150 ಗ್ರಾಂ ಬಂಗಾರದ ಆಭರಣ, 7 ಲಕ್ಷ 80 ಸಾವಿರ ನಗದು ಜಪ್ತಿ ಮಾಡಲಾಗಿದೆ. ಆರೋಪಿಗಳು ಹಗಲು ಹೊತ್ತಿನಲ್ಲಿ ಬೀಗ ಹಾಕಿದ ಮನೆ, ಅಂಗಡಿಗಳನ್ನು ಟಾರ್ಗೆಟ್ ಮಾಡಿ ಕಳ್ಳತನ ಮಾಡುತ್ತಿದ್ದರು ಎನ್ನಲಾಗಿದೆ.