ಕಲಬುರಗಿ: ಜಿಲ್ಲೆಯಲ್ಲಿ ನಿನ್ನೆ ದಾಖಲೆ ಪ್ರಮಾಣದಲ್ಲಿ ಕೊರೊನಾ ಸೋಂಕಿತರು ಪತ್ತೆಯಾಗಿದ್ದಾರೆ. ಬರೊಬ್ಬರಿ 624 ಜನರಿಗೆ ಸೋಂಕು ತಗುಲಿರುವದು ದೃಢಪಟ್ಟಿದ್ದು, ಜಿಲ್ಲೆಯಲ್ಲಿ ಮತ್ತೆ ಆತಂಕ ಸೃಷ್ಟಿಸಿದೆ.
ಕಳೆದ ಹತ್ತು ದಿನಗಳಿಂದ ಸರಾಸರಿ ನೂರು - ನೂರಾ ಐವತ್ತು ಪಾಸಿಟಿವ್ ಪ್ರಕರಣಗಳು ಪತ್ತೆಯಾಗುತ್ತಿದ್ದವು. ನಿನ್ನೆ ದಿಢೀರಾಗಿ 624 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, ಜಿಲ್ಲೆಯ ಜನತೆಯ ನಿದ್ದೆಗೇಡಸಿದೆ.
ಬುಧವಾರ ಒಂದೇ ದಿನದಲ್ಲಿ ಸೋಂಕಿನಿಂದ ನಾಲ್ವರು ಮೃತಪಟ್ಟಿದ್ದಾರೆ. ಗುರುವಾರ ಕಲಬುರಗಿಯ ಬ್ರಹ್ಮಪುರ ಬಡಾವಣೆಯ 55 ವರ್ಷದ ಮಹಿಳೆ ಸೋಂಕಿನಿಂದ ಮೃತಪಟ್ಟಿರುವುದು ದೃಢಪಟ್ಟಿದೆ. ಪ್ರತಿನಿತ್ಯ ಸರಿಸುಮಾರು ಎರಡರಿಂದ ಮೂರು ಜನ ಸೋಂಕಿಗೆ ಬಲಿಯಾಗುತ್ತಿದ್ದಾರೆ.
ಇನ್ನು ಜನರು ಸ್ಯಾನಿಟೈಸರ್, ಮಾಸ್ಕ್ ಮತ್ತು ಸಾಮಾಜಿಕ ಅಂತರ ಸೇರಿದಂತೆ ಕೊರೊನಾ ನಿಯಮಗಳನ್ನು ಪಾಲಿಸುವ ಮೂಲಕ ಕೋವಿಡ್ ನಿಯಂತ್ರಣವನ್ನು ಕೈಗೊಳ್ಳಬೇಕಾಗಿದೆ.