ETV Bharat / state

ಕಲಬುರಗಿ ಜಿಲ್ಲೆಯಲ್ಲಿ ಭಾರೀ ಮಳೆ: ನಡುಗಡ್ಡೆಯಲ್ಲಿ ಸಿಲುಕಿದ್ದ 8 ಮಂದಿ ರಕ್ಷಿಸಿದ ಸಾಹಸಿ ಮೀನುಗಾರರು - flood oparatio

ಗುರುವಾರ ರಾತ್ರಿ ಸುರಿದ ಭಾರೀ ಮಳೆಯಿಂದ ತಾಲೂಕಿನ ಬಿಬ್ಬಳ್ಳಿ ಗ್ರಾಮದಲ್ಲಿನ ಕಾಗಿಣಾ ನದಿ ತುಂಬಿ ಹರಿದಿದೆ. ಈ ವೇಳೆ ಕೃಷಿ ಕೆಲಸಕ್ಕೆ ತೆರಳಿದ್ದ 8 ಜನ ನದಿಯ ನಡುಗಡ್ಡೆಯಲ್ಲಿ ಸಿಲುಕಿದ್ದರು. ಬೆಳಗ್ಗೆ ಅಗ್ನಿಶಾಮಕ ದಳ ಹಾಗೂ ಸ್ಥಳೀಯರ ಸಹಕಾರದಿಂದ ಈ 8 ಮಂದಿಯನ್ನು ಯಶಸ್ವಿಯಾಗಿ ರಕ್ಷಣೆ ಮಾಡಲಾಗಿದೆ.

8 man's Rescued by Local Fishermen's from heavy flood in Klaburgi
ಭಾರಿ ಮಳೆಯಿಂದ ನಡುಗಡ್ಡೆಯಲ್ಲಿ ಸಿಲುಕಿದ್ದ 8 ಮಂದಿಯನ್ನು ರಕ್ಷಿಸಿದ ಮೀನುಗಾರರು
author img

By

Published : Jul 3, 2020, 4:10 PM IST

ಸೇಡಂ (ಕಲಬುರಗಿ): ರಣಭೀಕರ ಮಳೆಯಿಂದ ತುಂಬಿ ಹರಿಯುತ್ತಿದ್ದ ನದಿಯ ನಡುಗಡ್ಡೆಯಲ್ಲಿ ಸಿಲುಕಿದ್ದ 8 ಜನರನ್ನು ರಕ್ಷಿಸುವ ಮೂಲಕ ಮೀನುಗಾರರು ಸಾಹಸ ಮೆರೆದಿದ್ದಾರೆ.

ಭಾರೀ ಮಳೆಯಿಂದ ನಡುಗಡ್ಡೆಯಲ್ಲಿ ಸಿಲುಕಿದ್ದ 8 ಮಂದಿಯನ್ನು ರಕ್ಷಿಸಿದ ಮೀನುಗಾರರು

ಗುರುವಾರ ರಾತ್ರಿ ಸುರಿದ ಭಾರೀ ಮಳೆಯಿಂದ ತಾಲೂಕಿನ ಬಿಬ್ಬಳ್ಳಿ ಗ್ರಾಮದಲ್ಲಿನ ಕಾಗಿಣಾ ನದಿ ತುಂಬಿ ಹರಿದಿದೆ. ಈ ವೇಳೆ ಕೃಷಿ ಕೆಲಸಕ್ಕೆ ತೆರಳಿದ್ದ 8 ಜನ ನದಿಯ ನಡುಗಡ್ಡೆಯಲ್ಲಿ ಸಿಲುಕಿದ್ದರು.

ಬೆಳಗ್ಗೆ ಮಾಹಿತಿ ತಿಳಿದ ತಕ್ಷಣ ಕಾರ್ಯಪ್ರವೃತ್ತರಾದ ಗ್ರಾಮದ ಕೆಲ ಮೀನುಗಾರರು ರಕ್ಷಣೆಗೆ ಧಾವಿಸಿದ್ದಾರೆ. ಅಲ್ಲದೆ ಸತತ ಮೂರ್ನಾಲ್ಕು ಗಂಟೆಗಳ ಕಾಲ ಅಗ್ನಿಶಾಮಕ ಸಿಬ್ಬಂದಿಯ ಸಹಕಾರದೊಂದಿಗೆ ಕಾರ್ಯಾಚರಣೆ ನಡೆಸಿದ ಐದು ಜನ ಮೀನುಗಾರರ ತಂಡ, ನೀರಿನಲ್ಲಿ ಸಿಲುಕಿದ್ದ 8 ಜನರನ್ನು ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಇವರಲ್ಲಿ ಶರಣು ಎಂಬಾತ ನದಿಯಲ್ಲಿ ನಿರಂತರ ಹರಸಾಹಸ ನಡೆಸಿ 7 ಜನರನ್ನು ರಕ್ಷಿಸುವ ಮೂಲಕ ಸಾಹಸ ಮೆರೆದಿದ್ದು, ಜನರ ಮೆಚ್ಚುಗೆಗೆ ಪಾತ್ರವಾಗಿದ್ದಾನೆ. ನಂತರ ಗ್ರಾಮಸ್ಥರೆಲ್ಲರೂ ಕೂಡಿಕೊಂಡು ಮೀನುಗಾರರು ಮತ್ತು ಪೊಲೀಸ್ ಸಿಬ್ಬಂದಿಯನ್ನು ಸನ್ಮಾನಿಸಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.