ಕಲಬುರಗಿ: ಕೊರೊನಾ ತಡೆಗಟ್ಟಲು ರಾಜ್ಯಾದ್ಯಂತ ಇಂದು ಸಂಪೂರ್ಣ ಲಾಕ್ಡೌನ್ ಘೋಷಿಸಲಾಗಿದ್ದು, ಜಿಲ್ಲೆಯಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.
ಬಹುತೇಕ ರಸ್ತೆಗಳಲ್ಲಿ ಅಷ್ಟಾಗಿ ವಾಹನಗಳು ಕಾಣಿಸದೆ ಸಂಚಾರ ವಿರಳವಾಗಿದೆ. ತುರ್ತು ಸೇವೆಗಳಿಗೆ ಹೊರತುಪಡಿಸಿ ಬಹುತೇಕ ಅಂಗಡಿ ಮುಂಗಟ್ಟು ಬಂದ್ ಮಾಡಲಾಗಿದೆ. ಡಿಸಿಪಿ, ಎಸಿಪಿ, ಪಿಎಸ್ಐ ಸೇರಿ ಸುಮಾರು 700 ಪೊಲೀಸರನ್ನು ಬಂದೋಬಸ್ತ್ಗಾಗಿ ನಿಯೋಜನೆ ಮಾಡಲಾಗಿದೆ. ಮೂರು ಕೆ.ಎಸ್.ಆರ್.ಪಿ., 9 ಸಿ.ಎ.ಆರ್ ತುಕಡಿ ನಿಯೋಜನೆ ಮಾಡಲಾಗಿದೆ.
ತಾಲೂಕು ಕೇಂದ್ರ ಹಾಗೂ ಗ್ರಾಮೀಣ ಪ್ರದೇಶದಲ್ಲಿಯೂ ಆಯಕಟ್ಟಿನ ಸ್ಥಳಗಳಲ್ಲಿ ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ಜಿಲ್ಲೆಯಾದ್ಯಂತ ನಾಳೆ ಬೆಳಗ್ಗೆವರೆಗೆ ಮದ್ಯ ಮಾರಾಟ ನಿಷೇಧಿಸಲಾಗಿದೆ. ಬಸ್ ಸಂಚಾರ ಸಂಪೂರ್ಣ ಸ್ಥಗಿತವಾಗಿ ಕೇಂದ್ರ ಬಸ್ ನಿಲ್ದಾಣ ಬಿಕೋ ಎನ್ನುತ್ತಿದೆ.