ಕಲಬುರಗಿ: ವಿದ್ಯುತ್ ಬಿಲ್ ಕೇಳಲು ಬಂದ ವಿದ್ಯುತ್ ಇಲಾಖೆ ಸಿಬ್ಬಂದಿ ಮೇಲೆ ದಂಪತಿ ಹಲ್ಲೆ ಮಾಡಿದ ಘಟನೆ ಜಿಲ್ಲೆಯ ಆಳಂದ ತಾಲೂಕಿನ ಮಾದನಹಿಪ್ಪರಗಾ ಗ್ರಾಮದಲ್ಲಿ ನಡೆದಿದೆ.
ಕರೆಂಟ್ ಬಿಲ್ ಕೇಳಿದ್ದಕ್ಕೆ ಬಿಲ್ ಕಲೆಕ್ಟರ್ಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ಮಾಡಲಾಗಿದೆ. ಮಾದನಹಿಪ್ಪರಗಾ ಗ್ರಾಮದ ಶಾಂತಪ್ಪ ಮತ್ತು ಸಾವಿತ್ರಿ ದಂಪತಿ ಸಿಬ್ಬಂದಿ ಮೇಲೆ ಹಲ್ಲೆ ಮಾಡಿದ್ದಾರೆ. ಬಾಯಿಗೆ ಬಂದಂತೆ ಅವಾಚ್ಯ ಶಬ್ದಗಳಿಂದ ಬೈದು, ಹಲ್ಲೆ ಮಾಡಿದ್ದಾರೆ. ನಮ್ಮ ಹೋಟೆಲ್ ನ ವಿದ್ಯುತ್ ಸಂಪರ್ಕ ಕತ್ತರಿಸಿದ್ದಾರೆ ಎಂದು ಆರೋಪಿಸಿ ಸಾವಿತ್ರಿ ಎಂಬಾಕೆ ಜೆಸ್ಕಾಂ ಸಿಬ್ಬಂದಿಯ ಕೆನ್ನೆಗೆ ಬಾರಿಸಿದ್ದಾರೆ.
ದಂಪತಿ ವಿರುದ್ಧ ಮಾದನಹಿಪ್ಪರಗಾ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ.