ಕಲಬುರಗಿ: ಚಲಿಸುತ್ತಿದ್ದ ಕಾರಿಗೆ ದುಷ್ಕರ್ಮಿಗಳು ತಮ್ಮ ಕಾರು ಡಿಕ್ಕಿ ಹೊಡೆಸಿ ಬಳಿಕ ವ್ಯಕ್ತಿಯನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ ಘಟನೆ ನಗರದ ಹೊರವಲಯದ ಶರಣ ಸಿರಸಗಿ ಗ್ರಾಮದ ಬಳಿ ನಡೆದಿದೆ.
ಜೇವರ್ಗಿ ತಾಲೂಕಿನ ಮಯೂರ ಗ್ರಾಮದ ಶಿವಲಿಂಗ ಕೊಲೆಯಾದ ವ್ಯಕ್ತಿ ಎಂದು ಗುರುತಿಸಲಾಗಿದೆ. ಶಿವಲಿಂಗ ಅವರು ಕಾರಲ್ಲಿ ತೆರಳುವಾಗ ಮತ್ತೊಂದು ಕಾರಿನಲ್ಲಿ ಬಂದ ದುಷ್ಕರ್ಮಿಗಳು ಡಿಕ್ಕಿ ಹೊಡೆದು, ನಂತರ ದಾಳಿ ಮಾಡಿದ್ದಾರೆ.
ಹಲ್ಲೆಯಿಂದ ತೀವ್ರ ರಕ್ತಸ್ರಾವವಾಗಿ ಶಿವಲಿಂಗ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಹಳೆ ದ್ವೇಷವೆ ಕೊಲೆಗೆ ಕಾರಣ ಎನ್ನಲಾಗುತ್ತಿದೆ. ಈ ಕುರಿತು ಫರತಾಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ದುಷ್ಕರ್ಮಿಗಳ ಬಂಧನಕ್ಕೆ ಪೊಲೀಸರು ಜಾಲ ಬೀಸಿದ್ದಾರೆ.