ಕಲಬುರಗಿ: ಹಳೆ ವೈಷಮ್ಯದ ಹಿನ್ನೆಲೆಯಲ್ಲಿ ವ್ಯಕ್ತಿಯೋರ್ವನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆಗೈದ ಘಟನೆ ನಗರದ ಕಾಂಗ್ರೆಸ್ ಭವನದ ಬಳಿ ತಡರಾತ್ರಿ ನಡೆದಿದೆ. ತಡರಾತ್ರಿ 2 ಗಂಟೆಯ ಸುಮಾರಿಗೆ ಘಟನೆ ನಡೆದಿದೆ ಎಂಬ ಮಾಹಿತಿ ದೊರೆತಿದೆ.
ಘಟನೆಯ ವಿವರ
ಇಲ್ಲಿನ ರಾಜಾಪುರ ಬಡಾವಣೆಯ ನಿವಾಸಿ ರವಿ ಪೂಜಾರಿ ಹತ್ಯೆಯಾದ ವ್ಯಕ್ತಿ. ಎರಡು ವರ್ಷಗಳ ಹಿಂದೆ ರವಿ ಪೂಜಾರಿ, ಫೈನ್ ಆರ್ಟ್ ಕಾಲೇಜಿನಲ್ಲಿ ದ್ವಿತೀಯ ವರ್ಷದ ಪದವಿ ವ್ಯಾಸಂಗ ಮಾಡುತ್ತಿದ್ದ ಯುವತಿಯನ್ನು ಪ್ರೀತಿಸುತ್ತಿದ್ದ. ಆಕೆಗೆ ಮದುವೆಯಾಗುವುದಾಗಿ ನಂಬಿಸಿ ಗರ್ಭಿಣಿಯನ್ನಾಗಿಸಿ, ಬಳಿಕ ಗರ್ಭಪಾತ ಮಾಡಿಸಲು ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾನೆ. ಈ ವೇಳೆ ಯುವತಿಗೆ ಗರ್ಭಪಾತವಾಗಿದ್ದು ಸಾವನ್ನಪ್ಪಿದ್ದಳು. ಬಳಿಕ ಮೃತದೇಹವನ್ನು ಕಾರಿನಲ್ಲಿ ಹೈದರಾಬಾದ್ ಸಮೀಪ ತೆಗೆದುಕೊಂಡು ಹೋಗಿರುವ ಆರೋಪಿ ಪೆಟ್ರೋಲ್ ಹಾಕಿ ಸುಟ್ಟು ಹಾಕಿದ್ದನಂತೆ.
ಈ ಪ್ರಕರಣದಲ್ಲಿ ಜೈಲು ಪಾಲಾಗಿದ್ದ ರವಿ ಪೂಜಾರಿ ಕಳೆದ ಫೆಬ್ರವರಿ ತಿಂಗಳಿನಲ್ಲಿ ಜೈಲಿನಿಂದ ಹೊರಬಂದಿದ್ದಾನೆ. ಈ ಸಂಬಂಧ ಬ್ರಹ್ಮಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಇದನ್ನೂ ಓದಿ: ಬಿರಿಯಾನಿ ಚೆನ್ನಾಗಿಲ್ಲ ಎಂದಿದ್ದಕ್ಕೆ ಇಬ್ಬರಿಗೆ ಥಳಿಸಿದ ಹೋಟೆಲ್ ಸಿಬ್ಬಂದಿ