ಕಲಬುರಗಿ: ಚಾಕುವಿನಿಂದ ಇರಿದು ವ್ಯಕ್ತಿಯನ್ನು ಬರ್ಬರವಾಗಿ ಹತ್ಯೆಗೈದ ಘಟನೆ ನಗರದ ಹೊರವಲಯದ ಪೀರ್ ಬಂಗಾಲಿ ದರ್ಗಾ ಪ್ರದೇಶದಲ್ಲಿ ನಡೆದಿದೆ.
ಕೊಲೆಯಾದ ವ್ಯಕ್ತಿಯನ್ನು ಹನೀಫ್ ಖುರೇಶಿ (26) ಎಂದು ಗುರುತಿಸಲಾಗಿದ್ದು, ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆಗೈಯಲಾಗಿದೆ. ಹನೀಫ್ ಜಿಲ್ಲೆಯ ರಾಮಜಿ ನಗರದ ನಿವಾಸಿಯಾಗಿದ್ದು, ಮಟನ್ ಅಂಗಡಿ ಜೊತೆಗೆ ಆಟೋ ಚಲಾಯಿಸಿಕೊಂಡು ಜೀವನ ನಡೆಸುತ್ತಿದ್ದ. ದುಷ್ಕರ್ಮಿಗಳು ಚಾಕುವಿನಿಂದ ಇರಿದು ಪರಾರಿಯಾಗಿದ್ದಾರೆ. ಕೊಲೆಗೆ ಕಾರಣ ತಿಳಿದು ಬಂದಿಲ್ಲ. ಸ್ನೇಹಿತರಿಂದಲೇ ಈತನ ಕೊಲೆ ನಡೆದಿರುವ ಶಂಕೆ ವ್ಯಕ್ತವಾಗಿದೆ.
ಈ ಕುರಿತು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ದುಷ್ಕರ್ಮಿಗಳ ಬಂಧನಕ್ಕೆ ಪೊಲೀಸರು ಜಾಲ ಬೀಸಿದ್ದಾರೆ.