ETV Bharat / state

ಕಲಬುರಗಿಯಲ್ಲಿ ಭೀಕರ ಅಪಘಾತ: ಸ್ಥಳದಲ್ಲೇ ನಾಲ್ವರ ದುರ್ಮರಣ - ಕಲಬುರಗಿ: ನಗರದ ಹೊರವಲಯ ಕೋಟನೂರ ಬಳಿ ಅಪಘಾತ

ಕಾರು ಮತ್ತು ಟ್ಯಾಂಕರ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ, ಸ್ಥಳದಲ್ಲೇ ನಾಲ್ವರು ಮೃತಪಟ್ಟಿರುವ ಘಟನೆ ಕಲಬುರಗಿ ಹೊರವಲಯದಲ್ಲಿ ನಡೆದಿದೆ.

ಳದಲ್ಲೇ ನಾಲ್ವರ ದುರ್ಮರಣ
ಳದಲ್ಲೇ ನಾಲ್ವರ ದುರ್ಮರಣ
author img

By

Published : Jul 20, 2021, 7:21 AM IST

Updated : Jul 20, 2021, 8:17 AM IST

ಕಲಬುರಗಿ: ನಗರದ ಹೊರವಲಯದ ಕೋಟನೂರ ಬಳಿ ಇಟಿಯೋಸ್​ ಕಾರು ಮತ್ತು ಟ್ಯಾಂಕರ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಸ್ಥಳದಲ್ಲೇ ನಾಲ್ವರು ಮೃತಪಟ್ಟಿರುವ ಘಟನೆ ನಡೆದಿದೆ. ಮಧ್ಯರಾತ್ರಿ ಸುಮಾರು 1 ಗಂಟೆಗೆ ಈ ದುರಂತ ಸಂಭವಿಸಿದೆ.

ಮೃತರನ್ನು ಉಲ್ಲಾಸ್ (28), ರಾಹುಲ್ (24), ಕಾಶಿ (26) ಎಂದು ಗುರುತಿಸಲಾಗಿದ್ದು, ಮತ್ತೊಬ್ಬನ ಹೆಸರು ತಿಳಿದು ಬಂದಿಲ್ಲ. ಗಂಭೀರವಾಗಿ ಗಾಯಗೊಂಡಿರುವ ಮತ್ತೊಬ್ಬನನ್ನು ಜಿಲ್ಲೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಇದನ್ನೂ ಓದಿ : ಬಸ್ ನಿಲ್ದಾಣದಲ್ಲಿ ವೃದ್ಧೆಯ ಶವ ಪತ್ತೆ: ಅತ್ಯಾಚಾರ, ಕೊಲೆ ಶಂಕೆ

ಮೃತರೆಲ್ಲರೂ ಕಲಬುರಗಿ ನಿವಾಸಿಗಳಾಗಿದ್ದು, ಜೇವರ್ಗಿ ಮಾರ್ಗದಿಂದ ಕಲಬುರಗಿಗೆ ಕಾರಿನಲ್ಲಿ ಬರುತ್ತಿದ್ದರು. ಆಗ ಎದುರಿಗೆ ಬಂದ ಟ್ಯಾಂಕರ್​ ಡಿಕ್ಕಿ ಹೊಡೆದು ಈ ದುರಂತ ಸಂಭವಿಸಿದೆ. ನಗರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Last Updated : Jul 20, 2021, 8:17 AM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.