ಕಲಬುರಗಿ: ಅನೈತಿಕ ಸಂಬಂಧ ಶಂಕೆ ಹಿನ್ನೆಲೆಯಲ್ಲಿ ಮಹಿಳೆಯ ಮೇಲೆ ಸೈಜುಗಲ್ಲು ಹಾಕಿ ಬರ್ಬರವಾಗಿ ಹತ್ಯೆಗೈದ ಘಟನೆ ಆಳಂದ ತಾಲೂಕಿನ ದರ್ಗಾ ಶೀರೂರ್ ಗ್ರಾಮದಲ್ಲಿ ನಡೆದಿದೆ.
ಕೊಲೆಯಾದ ಮಹಿಳೆ ಸಿಂದಗಿ (ಬಿ) ಗ್ರಾಮದವರಾಗಿದ್ದು ಸುಮಾರು 30 ವರ್ಷದವರಾಗಿದ್ದಾರೆ. ಈಕೆಗೆ ದರ್ಗಾ ಶೀರೂರ್ ಗ್ರಾಮದ ವ್ಯಕ್ತಿಯೊಂದಿಗೆ ಅನೈತಿಕ ಸಂಬಂಧವಿತ್ತು ಎನ್ನಲಾಗಿದೆ. ಈ ನಡುವೆ ಆಕೆ ಮತ್ತೊಬ್ಬನೊಟ್ಟಿಗೆ ಅನೈತಿಕ ಸಂಬಂಧ ಹೊಂದಿದ್ದಳು ಎನ್ನಲಾಗಿದ್ದು, ಈ ವಿಷಯ ತಿಳಿದ ರಮೇಶ ಆಕೆಯ ತಲೆಯ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿದ್ದಾನೆ ಎಂಬ ಮಾಹಿತಿ ಸಿಕ್ಕಿದೆ.
ಕೊಲೆಯ ಬಳಿಕ ಆರೋಪಿ ಪೊಲೀಸ್ ಠಾಣೆಗೆ ತೆರಳಿ ಶರಣಾಗಿದ್ದಾನೆ. ಈ ಕುರಿತು ಪ್ರಕರಣ ದಾಖಲಿಸಿಕೊಂಡ ಮಾದನಹಿಪ್ಪರಗಾ ಠಾಣೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ.