ಕಲಬುರಗಿ: ಜಿಲ್ಲೆಯಲ್ಲಿ ವರುಣನ ಅಬ್ಬರ ಹೆಚ್ಚಾಗಿದೆ. ಮಳೆ ನೀರಿನಲ್ಲಿ ಯುವಕ ಕೊಚ್ಚಿಕೊಂಡು ಹೋಗಿರುವ ಘಟನೆ ಚಿಂಚೋಳಿ ತಾಲೂಕಿನ ಪೋತಂಗಲ್ ಬಳಿಯ ಕಾಗಿಣಾ ನದಿಯಲ್ಲಿ ನಡೆದಿದೆ.
ಪ್ರಹ್ಲಾದ್ (30) ಯುವಕ ಕೊಚ್ಚಿಕೊಂಡು ಹೋಗಿದ್ದು, ಶೋಧ ಕಾರ್ಯ ನಡೆಯುತ್ತಿದೆ. ಚಿಂಚೋಳಿ ತಾಲೂಕಿನಲ್ಲಿ ಭಾರಿ ಮಳೆಯಾಗುತ್ತಿದ್ದು ನೀಡಗುಂದ, ಕೊಳ್ಳೂರು, ದೇಗಲಮಡಿ ಒಳಗೊಂಡಂತೆ ಹತ್ತಾರು ಗ್ರಾಮಗಳು ಜಲಾವೃತಗೊಂಡಿವೆ. ಮನೆಗಳಿಗೆ ನೀರು ನುಗ್ಗಿ ದಿನೋಪಯೋಗಿ ವಸ್ತುಗಳು, ಆಹಾರ ಪದಾರ್ಥಗಳು ನೀರುಪಾಲಾಗಿವೆ.
ಗ್ರಾಮದ ರಸ್ತೆಗಳು ಜಲಾವೃತಗೊಂಡು ಸಂಪರ್ಕ ಕಡಿತಗೊಂಡಿದೆ. ಹೊಲಗಳಲ್ಲಿ ಮೊಣಕಾಲು ಮಟ್ಟ ಮಳೆ ನೀರು ನಿಂತು ಹೊಲಗಳು ಕೆರೆಗಳಂತಾಗಿವೆ.
ಇದನ್ನೂ ಓದಿ: ಪಂಚಭೂತಗಳಲ್ಲಿ ಕಾವೇರಮ್ಮನ ಪುತ್ರರತ್ನ ಲೀನ.. ಮಾದೇಗೌಡರು ಮಂಡ್ಯ ಜನರಲ್ಲಿ ಅಜರಾಮರ..