ಕಲಬುರಗಿ : ನಗರದ ಜ್ಞಾನಜ್ಯೋತಿ ಶಿಕ್ಷಣ ಸಂಸ್ಥೆಯಲ್ಲಿ ನಡೆದ ಪಿಎಸ್ಐ ನೇಮಕಾತಿ ಪರೀಕ್ಷಾ ಅಕ್ರಮ ಪ್ರಕರಣದ ಪ್ರಮುಖ ಆರೋಪಿ ದಿವ್ಯಾ ಹಾಗರಗಿಯನ್ನು ಬಂಧಿಸುವಂತೆ ಆಗ್ರಹಿಸಿ ಆಮ್ ಆದ್ಮಿ ಪಕ್ಷದ ಕಾರ್ಯಕರ್ತರು ಶುಕ್ರವಾರ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರಿಗೆ ಮುತ್ತಿಗೆೆ ಹಾಕಲು ಯತ್ನಿಸಿದರು. ಈ ವೇಳೆ ಪೊಲೀಸರು ಕಾರ್ಯಕರ್ತರನ್ನು ತಮ್ಮ ವಶಕ್ಕೆ ಪಡೆದರು.
ಇಲ್ಲಿನ ಎಸ್ ಎಂ ಪಂಡಿತ್ ರಂಗಮಂದಿರದ ಮುಂಭಾಗದಲ್ಲಿ 10ಕ್ಕೂ ಅಧಿಕ ಜನ ಆಪ್ ಕಾರ್ಯಕರ್ತರು ಸಿಎಂಗೆ ಮುತ್ತಿಗೆ ಹಾಕಲು ಪ್ರಯತ್ನಿಸಿದರು. ಆದರೆ, ಅವರನ್ನು ಪೊಲೀಸರು ತಡೆದು ತಮ್ಮ ವಾಹನಕ್ಕೆ ಹತ್ತಿಸಿದರು. ಇದರಿಂದ ಮತ್ತಷ್ಟು ಆಕ್ರೋಶಗೊಂಡ ಕಾರ್ಯಕರ್ತರು ಸಿಎಂ ವಿರುದ್ಧ ಘೋಷಣೆಗಳನ್ನು ಕೂಗಿದರು.
ಪಿಎಸ್ಐ ನೇಮಕಾತಿ ಪರೀಕ್ಷಾ ಅಕ್ರಮ ಪ್ರಕರಣವು ದಿನಕೊಂದು ತಿರುವು ಪಡೆದುಕೊಳ್ಳುತ್ತಿದೆ. ಪ್ರಮುಖ ಆರೋಪಿ ದಿವ್ಯಾ ಹಾಗರಗಿ ತೆಲೆಮರೆಸಿಕೊಂಡಿದ್ದು, ಈಕೆಗಾಗಿ ಸಿಐಡಿ ಅಧಿಕಾರಿಗಳು ಶೋಧ ಮುಂದುವರೆಸಿದ್ದಾರೆ.
ಈ ನಡುವೆ ಕಲಬುರಗಿ ಪ್ರವಾಸದಲ್ಲಿರುವ ಸಿಎಂ ಮೊಮ್ಮಾಯಿ ಅವರಿಗೆ ಇದು ತೆಲೆಬಿಸಿಯಾಗಿ ಪರಿಣಮಿಸಿದೆ. ಗುರುವಾರ ಕಾಂಗ್ರೆಸ್ ಯುವ ಘಟಕದ ಕಾರ್ಯಕರ್ತರು ಸಿಎಂ ಕಾರಿಗೆ ಮುತ್ತಿಗೆ ಹಾಕಲು ಮುಂದಾಗಿದ್ದರು.
ಇದನ್ನೂ ಓದಿ: ಗನ್‌ಮ್ಯಾನ್ ಅಕ್ರಮ ನೇಮಕಾತಿ ಬಗ್ಗೆ ನನಗೇನು ಗೊತ್ತಿಲ್ಲ: ಶಾಸಕ ಎಂ.ವೈ ಪಾಟೀಲ್