ಕಲಬುರಗಿ: ಬೈಕ್ಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ರಿಂಗ್ ರಸ್ತೆಯ ಚೌಕ್ ನಲ್ಲಿ ನಡೆದಿದೆ.
ನಗರದ ಪಾಯನ್ ಪ್ರದೇಶದ ನಿವಾಸಿ ಮಹ್ಮದ್ ಅಶ್ರಫ್ (38) ಮೃತ ದುರ್ದೈವಿ. ತಡರಾತ್ರಿ ಬೈಕ್ನಲ್ಲಿ ತೆರಳುತ್ತಿದ್ದಾಗ ಏಕಾಏಕಿ ಬಂದ ಅಪರಿಚಿತ ವಾಹನ ಡಿಕ್ಕಿ ಹೊಡೆದು ಈ ಅವಘಡ ಸಂಭವಿಸಿದೆ.
ಮತ್ತೊಬ್ಬ ಸವಾರನಿಗೆ ಗಂಭೀರ ಗಾಯಗಳಾಗಿದ್ದು, ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆ ಸಂಬಂಧ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.