ಕಲಬುರಗಿ: ಸಾರಿಗೆ ಬಸ್ ಮತ್ತು ಬೈಕ್ ನಡುವೆ ಡಿಕ್ಕಿ ಸಂಭಂವಿಸಿದ ಪರಿಣಾಮ, ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕಲಬುರಗಿ - ಜೇವರ್ಗಿ ರಸ್ತೆಯ ಸರಡಗಿ ಬಳಿ ನಡೆದಿದೆ.
ಕವಲಗಾ (ಕೆ) ಗ್ರಾಮದ ಮಲ್ಲಿಕಾರ್ಜುನ್ (18) ಮೃತ ಯುವಕ. ಕವಲಗಾ ಗ್ರಾಮದಿಂದ ಕಲಬುರಗಿಗೆ ಬರುವಾಗ ಮಾರ್ಗಮಧ್ಯೆ ಜೇವರ್ಗಿ ಕಡೆಗೆ ಹೊರಟಿದ್ದ ಬಸ್ ಡಿಕ್ಕಿ ಹೊಡೆದಿದ್ದು, ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.
ಬಸ್ನಲ್ಲಿದ್ದ ಹಲವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಜಿಲ್ಲಾಸ್ಪತ್ರೆ ಹಾಗೂ ಸ್ಥಳೀಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಕುರಿತು ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.