ಕಲಬುರಗಿ: ಅಪಘಾತದಲ್ಲಿ ಗಾಯಗೊಂಡಿದ್ದ ಬೈಕ್ ಸವಾರರಿಬ್ಬರನ್ನು ಆಸ್ಪತ್ರೆಗೆ ಸೇರಿಸಲು ನೆರವಾಗುವ ಮೂಲಕ ಶಾಸಕ ಬಸವರಾಜ್ ಮತ್ತಿಮೂಡ್ ಮಾನವೀಯತೆ ಮೆರೆದಿದ್ದಾರೆ.
ಕಲಬುರಗಿ ಶಹಾಬಾದ್ ಮುಖ್ಯರಸ್ತೆಯಲ್ಲಿ ಸಿಮೆಂಟ್ ಟ್ಯಾಂಕರ್ ಮತ್ತು ಬೈಕ್ ನಡುವೆ ಡಿಕ್ಕಿಯಾಗಿ ಬೈಕ್ ಸವಾರರಿಬ್ಬರು ನೋವಿನಿಂದ ನರಳಾಡುತ್ತಿದ್ದರು. ಅದೇ ಮಾರ್ಗದಲ್ಲಿ ಸಂಚರಿಸುತ್ತಿದ್ದ ಕಲಬುರಗಿ ಗ್ರಾಮಿಣ ಕ್ಷೇತ್ರದ ಶಾಸಕ ಬಸವರಾಜ್ ಮತ್ತಿಮೂಡ್ ಆ್ಯಂಬುಲೆನ್ಸ್ಗೆ ಕರೆಮಾಡಿ ಗಾಯಾಳುಗಳನ್ನ ಆಸ್ಪತ್ರೆಗೆ ಸಾಗಿಸಲು ನೆರವಾದರು.
ಶಾಸಕರ ಈ ಕಾರ್ಯದ ಬಗ್ಗೆ ಸಾರ್ವಜನಿಕರಿಂದ ಪ್ರಶಂಸೆ ವ್ಯಕ್ತವಾಗುತ್ತಿದೆ.