ಕಲಬುರಗಿ: ದನದ ಕೊಟ್ಟಿಗೆಗೆ ಆಕಸ್ಮಿಕ ಬೆಂಕಿ ತಗುಲಿದ ಪರಿಣಾಮ ಎತ್ತುಗಳು ಗಾಯಗೊಂಡ ಘಟನೆ ಜಿಲ್ಲೆಯ ರಟಕಲ್ ಗ್ರಾಮದಲ್ಲಿ ನಡೆದಿದೆ. ಇನ್ನು ಬೆಂಕಿಯಿಂದ ಬಿತ್ತನೆಗೆಂದು ಸಂಗ್ರಹಿಸಿಟ್ಟಿದ್ದ ಕಾಳು-ಕಡಿಗಳು ಸಹ ಸುಟ್ಟು ಭಸ್ಮವಾಗಿವೆ. ಸುಭಾಷ್ ಸಿಗಿ ಎಂಬುವರಿಗೆ ಸೇರಿದ ದನದ ಕೊಟ್ಟಿಗೆ ಇದಾಗಿದೆ.
ದನಗಳಿಗೆಂದು ಇಡಲಾಗಿದ್ದ ಕಾಳು-ಕಡಿಗೆ ಮೊದಲು ಬೆಂಕಿ ತಗುಲಿದ್ದು, ಕ್ಷಣಾರ್ಧದಲ್ಲಿ ಕೊಟ್ಟಿಗೆಗೂ ಆವರಿಸಿದೆ. ಇನ್ನು ಬೆಂಕಿಯನ್ನು ನೋಡುತ್ತಿದ್ದಂತೆ ಗ್ರಾಮಸ್ಥರು ಎತ್ತುಗಳನ್ನು ಕೊಟ್ಟಿಗೆಯಿಂದ ಹೊರ ತಂದಿದ್ದಾರೆ. ಘಟನೆಯಲ್ಲಿ ಒಂದು ಎತ್ತು ಗಂಭೀರವಾಗಿ ಗಾಯಗೊಂಡಿದ್ದು, ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ.
ಸುದ್ದಿ ತಿಳಿದು ಸ್ಥಳೀಯ ಪೊಲೀಸರು ಹಾಗೂ ಸಂಬಂಧಪಟ್ಟ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ಮಾಡಿದರು. ಈ ವೇಳೆ ಅಗ್ನಿ ಅವಘಡದಿಂದ ಬಡಪಾಯಿ ರೈತ ಕಂಗಾಲಾಗಿದ್ದು, ಸೂಕ್ತ ಪರಿಹಾರ ಕಲ್ಪಿಸಯವಂತೆ ಗ್ರಾಮಸ್ಥರು ಆಗ್ರಹಿಸಿದರು. ಪರಿಸ್ಥಿತಿ ಅರಿತ ಶಾಸಕ ಅವಿನಾಶ ಜಾಧವ್ ಎರಡು ದಿನದಲ್ಲಿ ವರದಿ ಸಲ್ಲಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ರಟಕಲ್ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.