ಕಲಬುರಗಿ : ಸಾರಿಗೆ ನೌಕರರ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ನಡೆದ ಮುಷ್ಕರದ ವೇಳೆ 9 ಜನ ಸಿಬ್ಬಂದಿ ಮೇಲೆ ಎಫ್‌ಐಆರ್ ದಾಖಲಾಗಿದೆ. ಅವರ ವಿರುದ್ಧ ನಿಯಮಾನುಸಾರ ಕ್ರಮ ಕೈಗೊಳ್ಳಲಾಗಿದೆ ಎಂದು ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಕೂರ್ಮಾರಾವ್ ಎಂ ತಿಳಿಸಿದ್ದಾರೆ.
ಸಂಸ್ಥೆಯ ವ್ಯಾಪ್ತಿಯಲ್ಲಿ ಬರುವ ಬೀದರ್ ವಿಭಾಗದ 5 ಸಿಬ್ಬಂದಿ, ಕೊಪ್ಪಳ ವಿಭಾಗದ 2 ಸಿಬ್ಬಂದಿ, ಬಳ್ಳಾರಿ ವಿಭಾಗದ ಓರ್ವ ಸಿಬ್ಬಂದಿ ಹಾಗೂ ವಿಜಯಪುರ ವಿಭಾಗದ ಓರ್ವ ಸಿಬ್ಬಂದಿ ಸೇರಿ ಒಟ್ಟು 9 ಸಿಬ್ಬಂದಿ ಮೇಲೆ ಕ್ರಮ ಕೈಗೊಳ್ಳಲಾಗಿದೆ.
ಅಲ್ಲದೆ, ಮುಷ್ಕರದ ಸಮಯದಲ್ಲಿ ಕರ್ತವ್ಯನಿರತ ಸಿಬ್ಬಂದಿ ಮೇಲೆ ದೈಹಿಕ ಹಲ್ಲೆ ಮಾಡಿ ಬಸ್ಗಳನ್ನು ಜಖಂಗೊಳಿಸಿದವರ ಮೇಲೆಯೂ ಕಾನೂನು ಕ್ರಮ ಕೈಗೊಳ್ಳುತ್ತಿರುವುದಾಗಿ ತಿಳಿಸಿದ್ದಾರೆ.
ಓದಿ: 84 ಜಿಲ್ಲಾ ನ್ಯಾಯಾಧೀಶರ ವರ್ಗಾವಣೆ: ಡಿ.28 ರಿಂದ ಆದೇಶ ಜಾರಿ
ಅದೇ ರೀತಿ ಮುಷ್ಕರ ಸಮಯದ 4 ದಿನಗಳ ವೇತನ ಪಾವತಿ ಕಡಿತದ ಬಗ್ಗೆಯೂ ಇನ್ನು ಯಾವುದೇ ನಿರ್ಧಾರ ಕೈಗೊಂಡಿರುವುದಿಲ್ಲ. ಈ 4 ದಿನಗಳ ವೇತನ ಪಾವತಿ ಕಡಿತದ ಬಗ್ಗೆ ಮಂಡಳಿ, ಸರ್ಕಾರದ ಮಟ್ಟದಲ್ಲಿ ಚರ್ಚಿಸಿ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಸ್ಪಷ್ಟಪಡಿಸಿದ್ದಾರೆ.