ಕಲಬುರಗಿ: ಜಿಲ್ಲಾ ಪಂಚಾತ್, ಜಿಲ್ಲಾಡಳಿತ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗಳ ಸಂಯುಕ್ತಾಶ್ರಯದಲ್ಲಿ ‘ಸಕ್ರಿಯ ಕ್ಷಯರೋಗ ಪತ್ತೆ ಮತ್ತು ಕ್ಷಯ ರೋಗದ ಸೇವೆಗಳು ಮನೆಬಾಗಿಲಿಗೆ’ ಕಾರ್ಯಕ್ರಮ ಉದ್ಘಾಟನಾ ಸಮಾರಂಭ ನಡೆಯಿತು.
ನಗರದ ಅಶೋಕ ನಗರ ಆರೋಗ್ಯ ಕೇಂದ್ರದಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಜಿಲ್ಲಾ ಪಂಚಾಯತ್, ಆರೋಗ್ಯ ಮತ್ತು ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷ ಶರಣಗೌಡ ಪಾಟೀಲ ಕಾರ್ಯಕ್ರಮ ಉದ್ಘಾಟಿಸಿದರು. ಸಮಾರಂಭದಲ್ಲಿ ಕ್ಷಯ ರೋಗದ ಕುರಿತು ಜನರಲ್ಲಿ ಜಾಗೃತಿ ಮೂಡಿಸಲಾಯಿತು. ಬಳಿಕ ಪ್ರಚಾರ ಜಾಥಾಕ್ಕೆ ಚಾಲನೆ ನೀಡಿದರು.
ಜಿಲ್ಲಾ ಆರೋಗ್ಯಾಧಿಕಾರಿ ಡಾ.ಎಂ.ಕೆ.ಪಾಟೀಲ, ಜಿಲ್ಲಾ ಕ್ಷಯರೋಗ ನಿಯಂತ್ರಣಾಧಿಕಾರಿ ಡಾ.ರಾಜೇಂದ್ರ ಭಾಲ್ಕೆ ಮತ್ತಿತರರು ಉಪಸ್ಥಿತರಿದ್ದರು.