ಕಲಬುರಗಿ: ಒಂದೆಡೆ ರಾಜ್ಯ ಸರಕಾರ ಮೌಢ್ಯ ನಿಷೇಧ ಕಾಯ್ದೆ ಜಾರಿಗೆ ತಂದಿದ್ದರೆ, ಇನ್ನೊಂದೆಡೆ ಪ್ರಗತಿಪರ ಮಠಾಧೀಶರ ತೀವ್ರ ಟೀಕೆಗೆ ಗುರಿಯಾಗಿದ್ದ ಅಡ್ಡ ಪಲ್ಲಕ್ಕಿ ಉತ್ಸವ ಕಲಬುರಗಿಯಲ್ಲಿ ಜಿಲ್ಲೆಯ ಕಡಣಿ ಗ್ರಾಮದಲ್ಲಿ ನಡೆಯಿತು.
ಕೆಲ ದಿನಗಳ ಹಿಂದೆ ತೀವ್ರ ಚರ್ಚೆಗೆ ಗ್ರಾಸವಾಗಿದ್ದ ಅಡ್ಡ ಪಲ್ಲಕಿ ಉತ್ಸವ ಕಲಬುರಗಿಯ ಕಡಣಿ ಗ್ರಾಮದಲ್ಲಿ ನಡೆದಿದೆ. ಶ್ರೀ ಗದ್ದಿಗೇಶ್ವರ ಸಂಸ್ಥಾನ ಹಿರೇಮಠದಲ್ಲಿ ರೇಣುಕಾಚಾರ್ಯರ ಮೂರ್ತಿ ಪ್ರತಿಷ್ಠಾಪನೆ ಹಾಗೂ ರಂಭಾಪುರಿ ಜಗದ್ಗುರುಗಳ ಅಡ್ಡಪಲ್ಲಕ್ಕಿ ಉತ್ಸವ ಇಂದು ವಿಜೃಂಭಣೆಯಿಂದ ನಡೆಯಿತು. ಭಕ್ತರು ರಂಭಾಪುರಿ ಜಗದ್ಗುರುಗಳನ್ನು ಪಲ್ಲಕ್ಕಿಯಲ್ಲಿ ಕುಳ್ಳಿರಿಸಿ ಗ್ರಾಮದಲ್ಲೆಲ್ಲ ಮೆರವಣಿಗೆ ನಡೆಸುವ ಮೂಲಕ ಸಂಭ್ರಮಿಸಿದರು.ರಂಭಾಪುರಿ ಜಗದ್ಗುರುಗಳ ಅಡ್ಡಪಲ್ಲಕ್ಕಿ ಉತ್ಸವ
ರಂಭಾಪುರಿ ಜಗದ್ಗುರುಗಳ ಅಡ್ಡಪಲ್ಲಕ್ಕಿ ಉತ್ಸವ