ಕಲಬುರಗಿ: ವಲಸೆ ಕಾರ್ಮಿಕರ ಸುರಕ್ಷಿತಾ ದೃಷ್ಟಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಅಖಿಲ ಭಾರತ ಮಹಿಳಾ ಸಾಂಸ್ಕೃತಿಕ ಸಂಘಟನೆ (ಎಐಎಂಎಸ್ಎಸ್) ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.
ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದ ಕಾರ್ಯಕರ್ತೆಯರು, ವಲಸೆ ಕಾರ್ಮಿಕರಿಗೆ ಹಾಗೂ ಮಹಿಳೆಯರಿಗೆ ಸುರಕ್ಷಿತ ಪ್ರಯಾಣಕ್ಕೆ ಖಾತ್ರಿಪಡಿಸಬೇಕು. ವಲಸೆ ಕಾರ್ಮಿಕರಿಗೆ ಸೂಕ್ತ ವೈದ್ಯಕೀಯ ಸೌಲಭ್ಯ ಕಲ್ಪಿಸಬೇಕು. ಮದ್ಯ ಮಾರಾಟ ಶಾಶ್ವತವಾಗಿ ನಿಲ್ಲಿಸಬೇಕು. ಕೆಲಸದ ಅವಧಿಯನ್ನು 10 ಗಂಟೆಗೆ ವಿಸ್ತರಿಸಿರುವುದನ್ನು ವಾಪಸ್ ಪಡೆಯುವಂತೆ ಆಗ್ರಹಿಸಿ ಜಿಲ್ಲಾಧಿಕಾರಿಗಳ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು.