ಕಲಬುರಗಿ: ಕಾರ್ಮಿಕರ ಹಿತಾಸಕ್ತಿ ನಿಟ್ಟಿನಲ್ಲಿ ರಾಷ್ಟ್ರಾದ್ಯಂತ ಹೋರಾಟ ಮಾಡಿ ಕಾರ್ಮಿಕರ ಏಳಿಗೆಗೆ ಶ್ರಮಿಸುತ್ತಿರುವ ಏಕೈಕ ಸಂಘಟನೆ ಎಐಟಿಯುಸಿ ಎಂದು ಆಶಾ ಕಾರ್ಯಕರ್ತೆಯರ ಸಂಘದ ರಾಜ್ಯ ಕಾರ್ಯದರ್ಶಿ ಡಿ ನಾಗಲಕ್ಷ್ಮಿ ಹೇಳಿದರು.
ನಗರದ ಶೆಮ್ಸ್ ಫಂಕ್ಷನ್ ಹಾಲ್ನಲ್ಲಿ ಎಐಟಿಯುಸಿ ವತಿಯಿಂದ ಹಮ್ಮಿಕೊಂಡಿದ್ದ ಎರಡು ದಿನದ ಜಿಲ್ಲಾ ಮಟ್ಟದ ಕಾರ್ಮಿಕರ ತರಬೇತಿ ಶಿಬಿರಕ್ಕೆ ಚಾಲನೆ ನೀಡಿ ಮಾತನಾಡಿದ ಡಿ.ನಾಗಲಕ್ಷ್ಮಿ, ಎಐಟಿಯುಸಿ ಸಂಘಟನೆಯು ಕಳೆದ ಹಲವು ವರ್ಷಗಳಿಂದ ಕಾರ್ಮಿಕರ ಶೋಷಿತ ವರ್ಗದವರ ಧ್ವನಿಯಾಗಿ ಸದಾ ಪ್ರತಿಭಟಿಸುತ್ತಾ ಬಂದಿದೆಯೆಂದು ತಿಳಿಸಿದರು.
ಶಿಬಿರದಲ್ಲಿ ಕಾರ್ಮಿಕರು ಎದುರಿಸುತ್ತಿರುವ ಸಮಸ್ಯೆ, ಸವಾಲುಗಳ ಕುರಿತು ಚರ್ಚಿಸಿ, ಮುಂದಿನ ದಿನಗಳಲ್ಲಿ ಕೈಗೊಳ್ಳಬೇಕಾದ ಹೋರಾಟಗಳ ಕುರಿತು ಸಮಾಲೋಚಿಸಲಾಯಿತು. ನ್ಯಾಯವಾದಿ ಎ.ಬಿ ಪಾಟೀಲ್, ಎಸ್.ಯು.ಸಿ.ಐ ಪಕ್ಷದ ಜಿಲ್ಲಾ ಸಂಚಾಲಕರಾದ ಎಸ್.ಎಮ್ ಶರ್ಮ ಸೇರಿದಂತೆ ಹಲವರು ಶಿಬಿರದಲ್ಲಿ ಭಾಗವಹಿಸಿದ್ದರು.