ಕಲಬುರಗಿ: ಅಕ್ರಮವಾಗಿ ಮೂರು ನಾಡ ಪಿಸ್ತೂಲ್ ಹೊಂದಿದ್ದ ವ್ಯಕ್ತಿಯನ್ನು ಬಂಧಿಸುವಲ್ಲಿ ಆಳಂದ ಪೊಲೀಸರು ಯಶಸ್ವಿಯಾಗಿದ್ದಾರೆ.
ಖಜೂರಿ ಗ್ರಾಮದ ಉಸ್ಮಾನ ಶೇಖ್ ಬಂಧಿತ ಆರೋಪಿ. ಆರೋಪಿಯಿಂದ 3 ನಾಡ ಪಿಸ್ತೂಲ್ ಮತ್ತು10 ಜೀವಂತ ಗುಂಡು ವಶಕ್ಕೆ ಪಡೆಯಲಾಗಿದೆ. ಬಂಧಿತ ಉಸ್ಮಾನ ಶೇಖ್ ಪಿಸ್ತೂಲ್ ಮಾರಾಟ ಮಾಡುತ್ತಿದ್ದ ಎಂಬ ಶಂಕೆ ವ್ಯಕ್ತವಾಗಿದೆ.
ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಪಿಸ್ತೂಲ್ ಎಲ್ಲಿಂದ ತರುತ್ತಿದ್ದ, ಯಾರಿಗೆ ಮಾರಾಟ ಮಾಡುತ್ತಿದ್ದ ಎನ್ನುವ ಕುರಿತು ತನಿಖೆ ಕೈಗೊಂಡಿದ್ದಾರೆ. ಆಳಂದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.