ಕಲಬುರಗಿ: ಜಿಲ್ಲೆಯ ಆಳಂದ ತಾಲೂಕಿನ ಮಾದನ ಹಿಪ್ಪರಗಾ ಸರ್ಕಾರಿ ಆಸ್ಪತ್ರೆಯ ವೈದ್ಯ ಬನ್ನಪ್ಪ ಪಾಟೀಲ್ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಕೇಳಿಬಂದಿದೆ. ಆರೋಪ ಕೇಳಿಬಂದ ಬಳಿಕ ವೈದ್ಯ ತಲೆಮರೆಸಿಕೊಂಡಿದ್ದಾರೆ.
ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುವ ಆಪ್ತ ಸಮಾಲೋಚಕಿ ಮೇಲೆ ಲೈಂಗಿಕ ದೌರ್ಜನ್ಯವೆಸಗಿರುವ ಆರೋಪ ಕೇಳಿಬಂದಿದೆ. ಕಳೆದ ಮೂರು ತಿಂಗಳಿನಿಂದ ಈ ವೈದ್ಯ ಆಪ್ತ ಸಮಾಲೋಚಕಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದರು ಎಂದು ದೂರಲಾಗಿದೆ.
'ಕಳೆದ ಜು. 29 ರಂದು ಆಸ್ಪತ್ರೆಯ ಕೊಠಡಿಯಲ್ಲಿ ಅಟೆಂಡೆನ್ಸ್ ಸಹಿ ಮಾಡೋದಕ್ಕೆ ತೆರಳಿದಾಗ, ವೈದ್ಯ ಪೈಶಾಚಿಕ ಕೃತ್ಯ ಎಸಗಿದ್ದಾರೆ. ತಾವುು ಕರೆದಾಗ ಕೊಠಡಿಗೆ ಬರಬೇಕು. ನನ್ನ ಜೊತೆ ಅಡ್ಜಸ್ಟ್ ಮಾಡಿಕೊಂಡಿಲ್ಲ ಅಂದ್ರೆ, ಕೆಲಸದಿಂದ ತೆಗೆದುಹಾಕುತ್ತೇನೆ ಎಂದು ಬೆದರಿಕೆ ಹಾಕಿದ್ದರು' ಎಂದು ಸಂತ್ರಸ್ತ ಮಹಿಳೆ ಆರೋಪಿಸಿದ್ದಾರೆ.
ಈ ಕುರಿತು ಮಾದನಹಿಪ್ಪರಗಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಬಳಿಕ ವೈದ್ಯ ಬನ್ನಪ್ಪ ಪಾಟೀಲ್ ಎಸ್ಕೇಪ್ ಆಗಿದ್ದಾರೆ ಎಂದು ತಿಳಿದುಬಂದಿದೆ.
ಇದನ್ನೂ ಓದಿ: ಕಲಬುರಗಿಯಲ್ಲಿ ಭಾರಿ ಮಳೆ - ವಿದ್ಯಾರ್ಥಿನಿಯರ ಮೇಲೆ ಕುಸಿದ ಕಟ್ಟಡದ ಮೇಲ್ಛಾವಣಿ