ಕಲಬುರಗಿ: ಲಾಕ್ಡೌನ್ ಡ್ಯೂಟಿಯಲ್ಲಿದ್ದ ಮಹಿಳಾ ಪೊಲೀಸ್ ಪೇದೆ ಬೈಕ್ಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದ ಘಟನೆ ಗುಲ್ಬರ್ಗಾ ವಿಶ್ವವಿದ್ಯಾಲಯದ ಸಮೀಪ ನಡೆದಿದೆ. ಘಟನೆಯಲ್ಲಿ ಪೇದೆಗೆ ಗಂಭೀರ ಗಾಯಗಳಾಗಿವೆ.
ರೇಣುಕಾ ಮಹಿಳಾ ಪೇದೆ ಕೆಲಸಕ್ಕೆ ಹೊರಟಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. ಪೇದೆಯನ್ನು ನಗರದ ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಪೇದೆ ಬೈಕ್ಗೆ ಡಿಕ್ಕಿ ಹೊಡೆದ ಅಪರಿಚಿತ ವಾಹನ ಸವಾರ ಪರಾರಿಯಾಗಿದ್ದಾನೆ. ವಿಶ್ವವಿದ್ಯಾಲಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.