ಕಲಬುರಗಿ: ರಾಜಸ್ಥಾನದ ಉದಯಪುರದಲ್ಲಿ ಮಂಗಳವಾರ ಹಾಡಹಗಲೇ ನಡೆದ ವ್ಯಕ್ತಿಯ ಬರ್ಬರ ಹತ್ಯೆಗೆ ತೀವ್ರ ವಿರೋಧ ವ್ಯಕ್ತವಾಗುತ್ತಿದೆ. ಈ ಕುರಿತು ಶ್ರೀರಾಮ ಸೇನೆ ರಾಜ್ಯಾಧ್ಯಕ್ಷ ಸಿದ್ದಲಿಂಗ ಶಿವಾಚಾರ್ಯ ಸ್ವಾಮೀಜಿ ಕೂಡ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕಲಬುರಗಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕನ್ಹಯ್ಯ ಲಾಲ್ ಕೊಲೆ ಪ್ರಕರಣ ಇಡಿ ದೇಶವೇ ತಲೆ ತಗ್ಗಿಸುವಂತಹ ವಿಚಾರ. ಆತನ ಅಂಗಡಿಗೆ ನುಗ್ಗಿ ಹಾಡು ಹಗಲೇ ಬರ್ಬರವಾಗಿ ಕೊಲೆ ಮಾಡಿದ್ದಾರೆ. ಆರೋಪಿಗಳಾದ ಮೊಹಮ್ಮದ ರಿಯಾಜ್ ಮತ್ತು ಅನ್ಸಾರಿ ಕೊಲೆ ಮಾಡಿದ ನಂತರ ವಿಡಿಯೋ ಮಾಡಿ ವಿಕೃತಿ ಮೆರೆದಿದ್ದಾರೆ. ಅಲ್ಲದೇ, ರಾಜ್ಯದಲ್ಲಿ ಉದ್ವಿಗ್ನ ವಾತಾವರಣ ಸೃಷ್ಟಿಸಿದ್ದಾರೆ ಎಂದರು.
ಘಟನೆಯಿಂದ ದೇಶದಲ್ಲಿ ಬಹುಸಂಖ್ಯಾತ ಹಿಂದೂಗಳು ಸುರಕ್ಷಿತವಿಲ್ಲ ಎಂಬುದು ಸಾಬೀತಾಗುತ್ತಿದೆ. ಕೊಲೆಗಡುಕರನ್ನು ಅರೆಸ್ಟ್ ಮಾಡಿ ಜೈಲಿಗೆ ಹಾಕಿ ಪೋಷಿಸಬಾರದು. ಇವರನ್ನ ಕಂಡಲ್ಲಿ ಗುಂಡಿಟ್ಟು ಹತ್ಯೆ ಮಾಡಬೇಕು ಎಂದು ಆಗ್ರಹಿಸಿದರು.
ಇದನ್ನೂ ಓದಿ: ರಾಜಸ್ಥಾನಕ್ಕೆ ಬಂದಿಳಿದ ಎನ್ಐಎ, 1 ತಿಂಗಳು ನಿಷೇಧಾಜ್ಞೆ ಜಾರಿ