ಕಲಬುರಗಿ: ಸರ್ಕಾರಿ ಶಾಲೆಗಳಲ್ಲಿ ಅಂಗನವಾಡಿಗಳನ್ನು ಆರಂಭಿಸುವ ಮೂಲಕ ರಾಜ್ಯ ಸರ್ಕಾರ ಅಂಗನವಾಡಿಗಳನ್ನು ದುರ್ಬಲಗೊಳಿಸುತ್ತಿದೆ ಎಂದು ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘ ಆರೋಪಿಸಿದ್ದು, ಈ ನಿರ್ಧಾರವನ್ನು ಕೈ ಬಿಡುವಂತೆ ಆಗ್ರಹಿಸಿದೆ.
ನರದಲ್ಲಿ ಮಾತನಾಡಿದ ನೌಕರರ ಸಂಘದ ರಾಜ್ಯ ಕಾರ್ಯಾಧ್ಯಕ್ಷೆ ಶಾಂತಾ ಘಂಟಿ, ರಾಜ್ಯದ 4100 ಸರ್ಕಾರಿ ಶಾಲೆಗಳಲ್ಲಿ ಎಲ್ಕೆಜಿ ಮತ್ತು ಯುಕೆಜಿ ಆರಂಭಿಸಲು ಸರ್ಕಾರ ಮುಂದಾಗಿದೆ. ಆ ಮೂಲಕ ಅಂಗನವಾಡಿ ಕೇಂದ್ರಗಳನ್ನು ದುರ್ಬಲಗೊಳಿಸಲು ಯತ್ನಿಸುತ್ತಿದೆ. ಕೂಡಲೇ ರಾಜ್ಯ ಸರ್ಕಾರ ತನ್ನ ನಿರ್ಧಾರ ಬದಲಿಸಬೇಕು. ಅಂಗನವಾಡಿಗಳಲ್ಲಿಯೇ ಎಲ್ಕೆಜಿ ಮತ್ತು ಯುಕೆಜಿ ಆರಂಭಿಸಬೇಕೆಂದು ಆಗ್ರಹಿಸಿದರು.