ಕಲಬುರಗಿ: ಬಿಜೆಪಿ ಸರ್ಕಾರ ಹೈದರಾಬಾದ್ ಕರ್ನಾಟಕವನ್ನು ಹೆಸರಿಗೆ ಮಾತ್ರ ಕಲ್ಯಾಣ ಕರ್ನಾಟಕವೆಂದು ಮಾಡಿದೆ. ಮಕ್ಕಳಿಗಾಗಿ ಯಾವುದೇ ಯೋಜನೆ ರೂಪಿಸಿಲ್ಲ ಎಂದು ಕಲಬುರಗಿ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಜಗದೇವ ಗುತ್ತೇದಾರ ಆರೋಪಿಸಿದ್ದಾರೆ.
ಕಲಬುರಗಿಯಲ್ಲಿ ಮಾತನಾಡಿದ ಅವರು, ಕಲ್ಯಾಣ ಕರ್ನಾಟಕಲ್ಲಿ ಸಾವಿರಾರು ಶಿಕ್ಷಕರ ಹುದ್ದೆಗಳು ಖಾಲಿ ಇವೆ. ಖಾಲಿ ಹುದ್ದೆಗಳ ಭರ್ತಿಗೆ ಸರ್ಕಾರ ಮುಂದಾಗುತ್ತಿಲ್ಲ. ಜೊತೆಗೆ ಕೊರೊನಾ ನೆಪದಲ್ಲಿ ಶಿಕ್ಷಕರಿಗೆ ಸಕಾಲಕ್ಕೆ ವೇತನವನ್ನೂ ಪಾವತಿಸುತ್ತಿಲ್ಲ. ಈ ನಡುವೆ ಆನ್ಲೈನ್ ಮೂಲಕ ಪಾಠ ಬೋಧನೆಗೆ ಸರ್ಕಾರ ಮುಂದಾಗಿದೆ ಎಂದು ಆರೋಪಿಸಿದರು.
ಶಿಕ್ಷಕರ ದಿನಾಚರಣೆಗೆ ರಾಜ್ಯ ಸರ್ಕಾರದ ಕೊಡುಗೆ ಇದೇನಾ ಎಂದು ಪ್ರಶ್ನಿಸಿರುವ ಜಗದೇವ ಗುತ್ತೇದಾರ, ಈಗಲಾದರೂ ಈ ಭಾಗದ ಶೈಕ್ಷಣಿಕ ಬೇಡಿಕೆಗಳನ್ನು ಈಡೇರಿಸುವಂತೆ ರಾಜ್ಯ ಸರ್ಕಾರವನ್ನು ಆಗ್ರಹಿಸಿದ್ದಾರೆ.