ಕಲಬುರಗಿ: ರಾಜ್ಯ ಸರ್ಕಾರ ಜಾರಿಗೆ ತಂದಿರುವ ಮಾನವ ಸಂಪನ್ಮೂಲ, ಕೃಷಿ ಮತ್ತು ಸಾಂಸ್ಕೃತಿಕ ಸಂಘದ ಪ್ರಥಮ ಹಾಗೂ ನೂತನ ಅಧ್ಯಕ್ಷರಾಗಿ ರಾಜ್ಯಸಭಾ ಮಾಜಿ ಸದಸ್ಯ ಬಸವರಾಜ ಪಾಟೀಲ ಸೇಡಂ ಅವರನ್ನು ನೇಮಕ ಮಾಡಲಾಗಿದೆ.
ಕಲ್ಯಾಣ ಕರ್ನಾಟಕ ಅಭಿವೃದ್ಧಿ ಉದ್ದೇಶದಿಂದ ಇದೇ ಮೊದಲ ಬಾರಿಗೆ ರಾಜ್ಯ ಸರ್ಕಾರ ಮಾನವ ಸಂಪನ್ಮೂಲ, ಕೃಷಿ ಮತ್ತು ಸಾಂಸ್ಕೃತಿಕ ಸಂಘವನ್ನು ಅಸ್ತಿತ್ವಕ್ಕೆ ತಂದಿದೆ. ಸಂಘದ ಅಧ್ಯಕ್ಷರಾಗಿ ರಾಜ್ಯಸಭಾ ಮಾಜಿ ಸದಸ್ಯ ಬಸವರಾಜ ಪಾಟೀಲ ಸೇಡಂರನ್ನು ಅಧ್ಯಕ್ಷರನ್ನಾಗಿಸಿ ಆದೇಶ ಹೊರಡಿಸಿದೆ. ಸಂಘದ ಅಧ್ಯಕ್ಷರಿಗೆ ಸಂಪುಟ ದರ್ಜೆ ಸ್ಥಾನಮಾನ ನೀಡಲಾಗಿದೆ. ಸಾವಯವ ಕೃಷಿಗೆ ಉತ್ತೇಜನ, ಆರೋಗ್ಯ ವೃದ್ಧಿ, ಶಿಕ್ಷಣ ಸುಧಾರಣೆ, ಮಹಿಳಾ ಸಬಲೀಕರಣ, ದೇಸೀ ಗೋ ತಳಿ ಅಭಿವೃದ್ಧಿ, ಸಾಂಸ್ಕೃತಿಕ ಸಿರಿವಂತಿಕೆ ಕಾಪಾಡುವುದು ಸೇರಿದಂತೆ ವಿವಿಧ ಉದ್ದೇಶಗಳನ್ನು ಈ ಸಂಘ ಹೊಂದಿದೆ.
ಕಲಬುರ್ಗಿ ಸಹಕಾರಿ ಸಂಘಗಳ ನಿಬಂಧಕರ ಕಚೇರಿಯಲ್ಲಿ ನೂತನ ಸಂಘದ ನೋಂದಣಿ ಮಾಡಲಾಗಿದೆ. ಈ ಸಂಘವೂ ಬೇರೆ ಸಂಘದ ಹೊರತೇನಲ್ಲ. ಆದರೆ, ಇದೆ ಮೊದಲ ಬಾರಿಗೆ ರಾಜ್ಯ ಸರ್ಕಾರವೇ ಸಂಘದ ಅಧ್ಯಕ್ಷರನ್ನು ನೇಮಕ ಮಾಡುವುದರ ಜೊತೆಗೆ ಅಧ್ಯಕ್ಷರಿಗೆ ಸಂಪುಟ ದರ್ಜೆ ಸ್ಥಾನಮಾನ ನೀಡಿರೋದು ಅಚ್ಚರಿಗೆ ಮೂಡಿಸಿದೆ.