ಕಲಬುರಗಿ: ಪ್ರತಿಭಟನಾನಿರತ ಕಾಂಗ್ರೆಸ್ ಕಾರ್ಯಕರ್ತರನ್ನು ಬಂಧಿಸಿದ ಘಟನೆ ನಗರದ ಟೌನ್ ಹಾಲ್ ಬಳಿ ನಡೆದಿದೆ.
ಉತ್ತರ ಪ್ರದೇಶದಲ್ಲಿ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಘಟನೆ ಹಾಗೂ ರಾಹುಲ್ ಗಾಂಧಿ ಜೊತೆ ಪೊಲೀಸರ ಅನುಚಿತ ವರ್ತನೆ ಖಂಡಿಸಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ಜಿಲ್ಲಾ ಕಾಂಗ್ರೆಸ್ ಸಮಿತಿ ನೇತೃತ್ವದಲ್ಲಿ ಪ್ರತಿಭಟನೆ ನಡೆದಿತ್ತು. ಕಾಂಗ್ರೆಸ್ ಕಚೇರಿಯಿಂದ ಮೆರವಣಿಗೆಯಲ್ಲಿ ಆಗಮಿಸಿದ ಮುಖಂಡರು, ಕಾರ್ಯಕರ್ತರು, ನಗರದ ಟೌನ್ ಹಾಲ್ ಮುಂಭಾಗ ರಸ್ತೆ ತಡೆ ನಡೆಸಿ ಪ್ರತಿಭಟಿಸಿದರು.
ಯುಪಿ ಸಿಎಂ ಯೋಗಿ ಆದಿತ್ಯನಾಥ್ ಪ್ರತಿಕೃತಿ ದಹಿಸಿ ಆಕ್ರೋಶ ವ್ಯಕ್ತಪಡಿಸಿದರು. ರಸ್ತೆ ತಡೆ ವಾಪಸ್ ಪಡೆಯುವಂತೆ ಹೇಳಿದರೂ ಪಟ್ಟು ಹಿಡಿದು ಕುಳಿತಾಗ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದಾರೆ. ಪ್ರತಿಭಟನಾನಿರತ ಸುಮಾರು 30ಕ್ಕೂ ಹೆಚ್ಚು ಜನರನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ.