ಕಲಬುರ್ಗಿ : ಉಪ ಚುನಾವಣೆಯಲ್ಲಿ ಬಿಜೆಪಿ ನಾಯಕರ ಅಣತೆಯಂತೆ ಕ್ಷೇತ್ರ ತ್ಯಾಗ ಮಾಡಿದ್ದ ಸುನೀಲ್ ವಲ್ಯಾಪುರೆ ಅವರನ್ನು ವಿಧಾನ ಪರಿಷತ್ ಸದಸ್ಯನಾಗಿ ಅವಿರೋಧ ಆಯ್ಕೆ ಮಾಡಲಾಗಿದೆ.
ಚಿಂಚೋಳಿ ಕ್ಷೇತ್ರದ ಕಾಂಗ್ರೆಸ್ ಶಾಸಕರಾಗಿದ್ದ ಉಮೇಶ್ ಜಾಧವ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಬಳಿಕ ಕಲಬುರ್ಗಿ ಲೋಕಸಭಾ ಕ್ಷೇತ್ರಕ್ಕೆ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿ ಕಾಂಗ್ರೆಸ್‌ನ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಜಯ ಕಂಡಿದ್ದರು.
ಉಮೇಶ್ ಜಾಧವ್ ಅವರಿಂದ ತೆರವಾದ ಶಾಸಕ ಸ್ಥಾನಕ್ಕೆ ನಡೆದ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಸುನಿಲ್ ವಲ್ಯಾಪುರೆ ನಾಯಕರ ಅಣತೆಯಂತೆ ಜಾಧವ್ ಪುತ್ರ ಅವಿನಾಶ ಜಾಧವ್‌ಗೆ ಕ್ಷೇತ್ರ ಬಿಟ್ಟುಕೊಟ್ಟು ಅವರ ಗೆಲುವಿಗೆ ಶ್ರಮಿಸಿದರು. ವಿಧಾನಪರಿಷತ್ ಸದಸ್ಯರಾಗಿ ನೇಮಕ ಮಾಡುವುದಾಗಿ ಅಂದು ಸಿಎಂ ಬಿಎಸ್ವೈ ಸೇರಿ ನಾಯಕರು ನೀಡಿದ ಮಾತಿನಂತೆ ಸುನಿಲ್ ವಲ್ಯಾಪುರೆ ಅವರನ್ನ ವಿಧಾನ ಪರಿಷತ್ತಿಗೆ ಆಯ್ಕೆ ಮಾಡಲಾಗಿದೆ.
ಇದು ವಲ್ಯಾಪುರೆ ಅಭಿಮಾನಿಗಳಲ್ಲಿ ಸಂತಸ ಮೂಡಿಸಿದೆ. ಕರ್ನಾಟಕ ವಿಧಾನಸಭೆಯ ಸದಸ್ಯರಿಂದ ವಿಧಾನ ಪರಿಷತ್ಗೆ 7 ಜನ ಅಭ್ಯರ್ಥಿಗಳನ್ನು ಅವಿರೋಧ ಆಯ್ಕೆ ಮಾಡಲಾಗಿದೆ. ಬಿಜೆಪಿಯಿಂದ ಎಂಟಿಬಿ ನಾಗರಾಜ್, ಪ್ರತಾಪ್ ಸಿಂಹ ನಾಯಕ್, ಆರ್.ಶಂಕರ್ ಹಾಗೂ ಸುನೀಲ್ ವಲ್ಯಾಪುರೆ ಈ ನಾಲ್ವರು ಅವಿರೋಧ ಆಯ್ಕೆಯಾಗಿದ್ದಾರೆ.
ಅದರಂತೆ ಕಾಂಗ್ರೆಸ್ ಪಕ್ಷದಿಂದ ನಸೀರ್ ಅಹ್ಮದ್, ಬಿ ಕೆ ಹರಿಪ್ರಸಾದ್ ಹಾಗೂ ಜೆಡಿಎಸ್ ಪಕ್ಷದಿಂದ ಗೋವಿಂದರಾಜು 7 ಜನ ಅವಿರೋಧ ಆಯ್ಕೆಯಾಗಿದ್ದಾರೆಂದು ವಿಧಾನಸಭೆ ಸಚಿವಾಲಯ ಕಾರ್ಯದರ್ಶಿಗಳು ಘೋಷಣೆ ಮಾಡಿದ್ದಾರೆ.