ETV Bharat / state

ನಮ್ಮ ನೋವು ಸರ್ಕಾರಕ್ಕೆ ಅರ್ಥವಾಗುತ್ತಿಲ್ಲ.. ಕಲಬುರಗಿಯಲ್ಲಿ ಆಶಾ ಕಾರ್ಯಕರ್ತೆ ಕಣ್ಣೀರು

ತಮ್ಮ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಆಶಾ ಕಾರ್ಯಕರ್ತೆಯರು ನಡೆಸುತ್ತಿರುವ ಪ್ರತಿಭಟನೆಯಲ್ಲಿ ಆಶಾ ಕಾರ್ಯಕರ್ತೆ ಕಣ್ಣೀರು ಹಾಕಿರುವ ಘಟನೆ ಕಲಬುರಗಿಯಲ್ಲಿ ನಡೆದಿದೆ..

dsds
ಕಲಬುರಗಿಯಲ್ಲಿ ಆಶಾ ಕಾರ್ಯಕರ್ತೆ ಕಣ್ಣೀರು
author img

By

Published : Jul 21, 2020, 5:58 PM IST

ಕಲಬುರಗಿ : ಸರ್ಕಾರ ನಮ್ಮ ಗೋಳು ಕೇಳುತ್ತಿಲ್ಲ ಎಂದು ಕೊರೊನಾ ವಾರಿಯರ್ ಆಶಾ ಕಾರ್ಯಕರ್ತೆಯೊಬ್ಬರು ಕಣ್ಣೀರು ಹಾಕಿ ಸರ್ಕಾರಕ್ಕೆ ಹಿಡಿ ಶಾಪ ಹಾಕಿದ ಘಟನೆ ನಡೆದಿದೆ.

ಕಲಬುರಗಿಯಲ್ಲಿ ಆಶಾ ಕಾರ್ಯಕರ್ತೆ ಕಣ್ಣೀರು

ಮಾಸಿಕ ₹12 ಸಾವಿರ ಗೌರವ ಧನ ನೀಡಲು ಆಗ್ರಹ ಎಐಯುಟಿಯುಸಿ ನೇತೃತ್ವದಲ್ಲಿ ಚಿತ್ತಾಪುರದ ವಾಡಿ ಪೊಲೀಸ್ ಠಾಣೆ ಎದುರು ಪ್ರತಿಭಟನೆ ನಡೆಸುತ್ತಿದ್ದರು. ಈ ವೇಳೆ ಕಷ್ಟ ತಾಳಲಾಗದೆ ನೋವು ಹೇಳಿಕೊಳ್ಳುತ್ತಾ ಆಶಾಕಾರ್ಯಕರ್ತೆ ಕಣ್ಣೀರಿಟ್ಟಿದ್ದಾರೆ. ಕೊರೊನಾ ಸೋಂಕಿನ ವೇಳೆ ಹಗಲಿರುಳು ದುಡಿಯುತ್ತಿದ್ದೇವೆ. ಆದರೂ ಸಮಾನ ಕೆಲಸಕ್ಕೆ ಸಮಾನ ವೇತನ ಸಿಗುತ್ತಿಲ್ಲ.

ಈ ಕುರಿತು ಸರ್ಕಾರಕ್ಕೆ ಹತ್ತು ಬಾರಿ ಮನವಿ ಸಲ್ಲಿಸಿದ್ರೂ ಯಾವುದೇ ಪ್ರಯೋಜನವಾಗಿಲ್ಲ. ಸರ್ಕಾರದಿಂದ ಯಾವುದೇ ಪ್ರತಿಕ್ರಿಯೆ ದೊರೆತಿಲ್ಲ ಎಂದು ಆಶಾ ಕಾರ್ಯಕರ್ತೆ ಅಳಲು ತೋಡಿಕೊಂಡಿದ್ದಾರೆ. ಬೇಡಿಕೆ ಈಡೇರುವವರೆಗೂ ಕೆಲಸ ಮುಂದುವರಿಸುವುದಿಲ್ಲ ಎಂದು ಪ್ರತಿಭಟನಾಕಾರರು ಎಚ್ಚರಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.