ಕಲಬುರಗಿ: ಮಾಸಿಕ 12 ಸಾವಿರ ರೂ. ವೇತನ ನಿಗದಿ ಮಾಡುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಎಐಯುಟಿಯುಸಿ ಹಾಗೂ ಕರ್ನಾಟಕ ರಾಜ್ಯ ರೈತ ಸಂಘದ ನೇತೃತ್ವದಲ್ಲಿ ಆಶಾ ಕಾರ್ಯಕರ್ತೆಯರು ಪ್ರತಿಭಟನೆ ನಡೆಸಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದ ಆಶಾ ಕಾರ್ಯಕರ್ತೆಯರು, ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಆಶಾ ಕಾರ್ಯಕರ್ತೆಯರು ಆರೋಗ್ಯ ಇಲಾಖೆ ಹಾಗೂ ಜನಸಮೂಹದ ಮಧ್ಯೆ ಸಂಪರ್ಕ ಸೇತುವೆಯಾಗಿ ನಿಸ್ವಾರ್ಥದಿಂದ ಸರ್ಕಾರದ ಯೋಜನೆಗಳನ್ನು ಜನರಿಗೆ ತಲುಪಿಸಲು ಶ್ರಮಿಸುತ್ತಿದ್ದಾರೆ. ಅಲ್ಲದೆ ಕೋವಿಡ್ ಸಂದರ್ಭದಲ್ಲಿ ಪ್ರಮಾಣಿಕವಾಗಿ ಸೇವೆ ಸಲ್ಲಿಸಿದ್ದಾರೆ. ಆದ್ರೆ ಸರ್ಕಾರ ಆಶಾ ಕಾರ್ಯಕರ್ತೆಯರ ಮಾಸಿಕ ವೇತನ ಹೆಚ್ಚಿಸುವುದಿರಲಿ, ಸರಿಯಾದ ಸಮಯಕ್ಕೆ ವೇತನ ನೀಡುತ್ತಿಲ್ಲ. ಈ ಕುರಿತು ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.