ಕಲಬುರಗಿ: ಕೊರೊನಾ ನಿಯಂತ್ರಣ ಸೇರಿದಂತೆ ವಿವಿಧ ಕಾರ್ಯಗಳಿಗಾಗಿ ಹಗಲಿರುಳು ದುಡಿದರೂ ಕಡಿಮೆ ಸಂಬಳ ನೀಡಲಾಗುತ್ತಿದೆ ಎಂದು ಆರೋಪಿಸಿ ಆಶಾ ಕಾರ್ಯಕರ್ತೆಯರು ಕಲಬುರಗಿಯ ವಿವಿಧೆಡೆ ಪ್ರತಿಭಟನೆ ನಡೆಸಿದರು.
ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘ ಹಾಗೂ ಆಲ್ ಇಂಡಿಯಾ ಯುನೈಟೆಡ್ ಟ್ರೇಡ್ ಯೂನಿಯನ್ ಸೆಂಟರ್ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಕಛೇರಿ ಎದುರು ಪ್ರತಿಭಟನೆ ನಡೆಸಲಾಯಿತು.
ಕೊರೊನಾ ವಾರಿಯರ್ಸ್ ಆಗಿಯೂ ಸೇವೆ, ಎಸ್ಎಸ್ಎಲ್ಸಿ ಪರೀಕ್ಷೆ ಡ್ಯೂಟಿಗೂ ಆಶಾ ಕಾರ್ಯಕರ್ತೆಯರ ಬಳಕೆಯಾದರೂ ಸಂಬಳ ಮಾತ್ರ ಕಡಿಮೆ ಕೊಟ್ಟು ಶೋಷಣೆ ಮಾಡಲಾಗುತ್ತಿದೆ ಎಂದು ಆರೋಪಿಸಿದರು. ಮಾಸಿಕ 12 ಸಾವಿರ ರೂಪಾಯಿ ಗೌರವ ಧನ ನೀಡಲು ಒತ್ತಾಯಿಸಿ, ಡಿಸಿ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.