ಸೇಡಂ: ಭೀಕರ ಮಳೆಯಿಂದ ಉಕ್ಕಿ ಹರಿಯುತ್ತಿರುವ ನದಿ ಪಾತ್ರದ ಪ್ರದೇಶಗಳಿಗೆ ಸಹಾಯಕ ಆಯುಕ್ತ ರಮೇಶ ಕೋಲಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ತಾಲೂಕಿನ ಮಳಖೇಡದ ಕಾಗಿಣಾ ನದಿ ಉಕ್ಕಿ ಹರಿದ ಪರಿಣಾಮ ಕಲಬುರಗಿಗೆ ಸಂಪರ್ಕ ಕಲ್ಪಿಸುವ ಬ್ರಿಡ್ಜ್ ಸಂಪೂರ್ಣ ಮುಳುಗಡೆಯಾಗಿದ್ದು, ನದಿ ಪಾತ್ರದ ಅನೇಕ ಮನೆಗಳಿಗೆ ನೀರು ನುಗ್ಗಿದೆ. ಹಲವು ಮನೆಗಳು ಜಲಾವೃತವಾಗಿದ್ದು, ಮುನ್ನೆಚ್ಚರಿಕಾ ಕ್ರಮಗಳ ಕುರಿತು ಸಹಾಯಕ ಆಯುಕ್ತ ಪರಿಶೀಲಿಸಿದರು.
ಈ ವೇಳೆ ರಮೇಶ ಕೋಲಾರ ಜೊತೆ ತಹಶೀಲ್ದಾರ್ ಬಸವರಾಜ ಬೆಣ್ಣೆಶಿರೂರು ಸಹ ಉಪಸ್ಥಿತರಿದ್ದರು.