ಕಲಬುರಗಿ: ಮೊನ್ನೆ ತಡರಾತ್ರಿ ಎಟಿಎಂ ಕಳ್ಳತನಕ್ಕೆ ವಿಫಲ ಯತ್ನ ನಡೆಸಿದ್ದ ಆರೋಪಿಯನ್ನು ಬಂಧಿಸುವಲ್ಲಿ ಸ್ಟೇಷನ್ ಬಜಾರ್ ಪೊಲೀಸರು ಯಶಸ್ವಿಯಾಗಿದ್ದಾರೆ.
ಜಿಲ್ಲೆಯ ಮುಗಳನಾಗಾವಿ ಗ್ರಾಮದ ನಿವಾಸಿ ಹರಿಶ್ಚಂದ್ರ ರಾಥೋಡ್ (22) ಬಂಧಿತ ಆರೋಪಿ ಎಂದು ಪೊಲೀಸರು ತಿಳಿಸಿದ್ದಾರೆ. ತಡರಾತ್ರಿ ಹೊಸ ಜೇವರ್ಗಿ ರಸ್ತೆಯಲ್ಲಿರುವ ಕೆನರಾ ಬ್ಯಾಂಕ್ ಎಟಿಎಂ ಒಡೆದು ಹಣ ಕದಿಯಲು ಯತ್ನಿಸಿದ್ದ. ಈ ವೇಳೆ ವಿಫಲನಾದ ಬಳಿಕ ತಲೆಮರೆಸಿಕೊಂಡಿದ್ದ.
ಮೋಜು ಮಸ್ತಿಗಾಗಿ ಎಟಿಎಂ ಹಣ ಕದಿಯಲು ಹೋಗಿದ್ದಾಗಿ ಆರೋಪಿ ಒಪ್ಪಿಕೊಂಡಿದ್ದಾನೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಈ ಕುರಿತು ಸ್ಟೇಷನ್ ಬಜಾರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.